News Karnataka Kannada
Tuesday, April 23 2024
Cricket
ದೇಶ

ಗೋಲ್ವಾಲ್ಕರ್ ವಿರುದ್ಧ ಪೋಸ್ಟ್: ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ದೂರು

Congress leader Digvijaya Singh
Photo Credit : Wikipedia
ವಾರಾಣಸಿ: ರಾಷ್ಟ್ರೀಯ ಸ್ವಯಂ ಸೇವಾ ಸಂಘ RSS ಮಾಜಿ ಮುಖ್ಯಸ್ಥ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಕಾಂಗ್ರೆಸ್ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ವಿರುದ್ಧ ಸಂಸದ-ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಕಾಶಿಯ ಬಿಜೆಪಿ ಕಾನೂನು ಘಟಕದ ಸಂಚಾಲಕರೂ ಆಗಿರುವ ವಕೀಲ ಶಶಾಂಕ್ ಶೇಖರ್ ತ್ರಿಪಾಠಿ ಅವರು ದಿಗ್ವಿಜಯ್ ಸಿಂಗ್ ದೂರು ದಾಖಲಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಶನಿವಾರ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯವು ಹೇಳಿಕೆ ಮತ್ತು ಸಾಕ್ಷ್ಯವನ್ನು ದಾಖಲಿಸಲು ಜುಲೈ 18ಕ್ಕೆ ಸಮಯ ನಿಗದಿಪಡಿಸಿದೆ ಎಂದು ಅವರು ಹೇಳಿದ್ದಾರೆ.

ಅಧಿಕೃತ ಟ್ವಿಟರ್ ಖಾತೆಯ ಮೂಲಕ ದಿಗ್ವಿಜಯ್ ಸಿಂಗ್ ಸಾಮಾಜಿಕ ದ್ವೇಷವನ್ನು ಉಂಟುಮಾಡುವ, ಗೋಲ್ವಾಲ್ಕರ್ ಅವರ ಬಗ್ಗೆ ಸುಳ್ಳು ಸುದ್ದಿ ಮತ್ತು ತಿರುಚಿದ ಚಿತ್ರಗಳನ್ನು ಪ್ರಕಟಿಸುವ ಮೂಲಕ ಆರ್ಎಸ್ಎಸ್ನ ಘನತೆಗೆ ಕಳಂಕ ತಂದಿದ್ದಾರೆ. ಸಮಾಜದಲ್ಲಿ ದ್ವೇಷವನ್ನು ಹುಟ್ಟುಹಾಕುವ ಮತ್ತು ಆರ್ಎಸ್ಎಸ್ಗೆ ಕಳಂಕ ತರುವ ಉದ್ದೇಶದಿಂದ ಸಿಂಗ್ ಅವರು ಉದ್ದೇಶಪೂರ್ವಕವಾಗಿ ಇಂತಹ ಸುಳ್ಳು ಸಂಗತಿಗಳನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ವಕೀಲ ಮತ್ತು ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಜೋಶಿ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಇಂದೋರ್ನಲ್ಲಿ ದಿಗ್ವಿಜಯ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು