ಕನ್ನೌಜ್: ಪತ್ನಿಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾದ ಘಟನೆ ಕನೌಜ್ ಜಿಲ್ಲೆಯ ತಿರ್ವಾ ಕೊಟ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮಹಿಳೆ ದೂರು ನೀಡಿದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ.
2020 ರ ನವೆಂಬರ್ 25 ರಂದು ಆರೋಪಿಯೊಂದಿಗೆ ಮಹಿಳೆ ವಿವಾಹ ನಡೆದಿತ್ತು. ಮದುವೆಯಾದ ಕೂಡಲೇ ಆಕೆಯ ಅತ್ತೆ 2 ಲಕ್ಷ ರೂಪಾಯಿ ಮತ್ತು ಚಿನ್ನದ ಸರವನ್ನು ನೀಡುವಂತೆ ಒತ್ತಾಯಿಸಿದರು ಎಂದು ಅವರು ಆರೋಪಿಸಿದ್ದಾರೆ.
ಆಕೆಯನ್ನು ಡಿಸೆಂಬರ್ 24, 2021 ರಂದು ಮನೆಯಿಂದ ಹೊರಹಾಕಲಾಯಿತು. ಬಳಿಕ ಆಕೆ ಮಾ.18ರಂದು ಏಳು ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ಈ ವೇಳೆ ಪತಿ ಮನೆಯವರು ದೂರು ಹಿಂಪಡೆಯಲು ಒತ್ತಾಯಿಸಿದ್ದು, ಆಕೆ ನಿರಾಕರಿಸಿದಾಗ ಪತಿ ತನ್ನ ಫೋಟೋಗಳನ್ನು ಮಾರ್ಫ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾನೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…