ದೇಶ

ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ʻಕೈʼ ನಾಯಕರ ಪ್ರತಿಭಟನೆ ಆರಂಭ

ವದೆಹಲಿ : ದೆಹಲಿಯ ಜಂತರ್ ಮಂತರ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಸಚಿವರು, ಶಾಸಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅನುದಾನ ಬಿಡುಗಡೆ, ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಕಾಂಗ್ರೆಸ್ ಸರ್ಕಾರ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ  ಸಿಎಂ ಸಿದ್ದರಾಮಯ್ಯ,  ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ತಾರತಮ್ಯವೆಸಗಿದೆ. ಅನುದಾನ ಬಿಡುಗಡೆಯಲ್ಲಿ ಅನ್ಯಾಯ ಮಾಡಿದೆ. ನಾವು ರಾಜ್ಯದ ಸಂಸದರಿಗೂ ಪತ್ರ ಬರೆದು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಡಲು ಬರಲು ಕರೆ ನೀಡಿದ್ದೆವು. ಇದೊಂದು ಬೃಹತ್ ಚಳುವಳಿ.

ನಾವು 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕಟ್ಟುತ್ತೇವೆ. 100 ರೂಪಾಯಿ ತೆರಿಗೆ ಕಟ್ಟಿದ್ದರೆ ಕೇವಲ 12 ರೂಪಾಯಿ ಮಾತ್ರ ನಮಗೆ ಬರುತ್ತಿದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಹಣ ನೀಡಬೇಕು. ಆದರೆ ಹಣ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Ashitha S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago