News Karnataka Kannada
Monday, May 20 2024
ದೇಶ

ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್​​​ಗೆ ಕ್ಷಣಗಣನೆ

Photo Credit : News Kannada

ನವದೆಹಲಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್​​​ಗೆ ಕ್ಷಣಗಣನೆ ಶುರುವಾಗಿದೆ.

ದೆಹಲಿಯಲ್ಲಂತೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಂಸತ್ ಭವನ ಸೇರಿದಂತೆ ಸರ್ಕಾರಿ ಕಟ್ಟಡಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಣತಂತ್ರದ ಪರೇಡ್​​​ ಚಲನದ ಇತಿಹಾಸದಲ್ಲಿ ಮೊದಲ ಬಾರಿಗೆ ದೆಹಲಿ ಮಹಿಳಾ ಪೊಲೀಸರು ಭಾಗಿಯಾಗಲಿದ್ದಾರೆ.

ಈ ತುಕಡಿಯಲ್ಲಿ ಸಂಪೂರ್ಣ ಮಹಿಳಾ ಪೊಲೀಸರು ಕರ್ತವ್ಯ ಪಥದಲ್ಲಿ ಹೆಜ್ಜೆ ಹಾಕಲಿದ್ದಾರೆ. ಲಿಂಗ ಸಮಾನತೆ ಮತ್ತು ಮಹಿಳಾ ಸಬಲೀಕರಣ ಥೀಮ್​ ಅಡಿ 194 ಮಹಿಳಾ ಪೊಲೀಸರು ಪರೇಡ್ ಮಾಡಲಿದ್ದು, ಐಪಿಎಸ್ ಅಧಿಕಾರಿ ಶ್ವೇತಾ ಕೆ. ಸುಗತನ್ ಅವರು ಈ ಪಡೆಯನ್ನ ಮುನ್ನಡೆಸಲಿದ್ದಾರೆ.

ಈಗಾಗಲೇ ಭಾರತಕ್ಕೆ ಬಂದಿಳಿದಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರಾನ್ 75ನೇ ಗಣರಾಜ್ಯೋತ್ಸವ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದಾರೆ. ಇದಲ್ಲದೆ ದೇಶ ವಿದೇಶಗಳ 13 ಸಾವಿರ ಅತಿಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಟ್ಟು 70 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಸಾರ್ವಜನಿಕರಿಗಾಗಿ 42 ಸಾವಿರ ಆಸನಗಳನ್ನು ಮೀಸಲಿರಿಸಲಾಗಿದೆ.

ಬೆಳಗ್ಗೆ 10.30ಕ್ಕೆ ಪರೇಡ್‌ಗೆ ರಾಷ್ಟ್ರಪತಿ ಚಾಲನೆ ನೀಡಲಿದ್ದಾರೆ. ಈ ಬಾರಿ 90 ನಿಮಿಷಗಳವರೆಗೆ ನಡೆಯಲಿರುವ ಪರೇಡ್ ನಡೆಯಲಿದೆ. ವಿಜಯ್‌ ಚೌಕ್‌ನಿಂದ ಕರ್ತವ್ಯಪಥ್‌ವರೆಗೆ ಪರೇಡ್ ಸಾಗಲಿದೆ. ಭೂಸೇನೆ, ನೌಕಾ, ವಾಯುಸೇನೆಯಿಂದ, ಪ್ಯಾರಾಮಿಲಿಟರಿ ಪಡೆಗಳಿಂದ ಪರೇಡ್‌ನಡೆಯಲಿದೆ. ದೇಶದ ವಿವಿಧೆಡೆಯ ಸಂಸ್ಕೃತಿ, ಪರಂಪರೆ ಬಿಂಬಿಸೋದ್ರ ಜತೆ, ವಿಜ್ಞಾನ ತಂತ್ರಜ್ಞಾನ ಬಿಂಬಿಸುವ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಲಿದೆ.

ಇನ್ನು ಗಣರಾಜ್ಯೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಭದ್ರತೆ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಸೇನೆ, ಖಾಕಿ ಕೋಟೆಯೇ ನಿರ್ಮಾಣವಾಗಿದೆ. ಡ್ರೋನ್‌ಗಳ ಹಾರಾಟವನ್ನು ನಿಷೇಧಿಸಲಾಗಿದೆ. ಕಟ್ಟಡಗಳ ಮೇಲೆ ಶಾರ್ಪ್‌ಶೂಟರ್‌ಗಳನ್ನು ನಿಯೋಜಿಸಲಾಗಿದೆ. ಎಲ್ಲೆಲ್ಲೂ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಕಾರ್ಯಕ್ರಮಕ್ಕೆ ಬರೋರಿಗೆ, ತಿಂಡಿ, ನೀರಿನ ಬಾಟಲ್, ಗನ್, ಚಾಕು, ಚೂಪಾದವಸ್ತುಗಳು, ಕೊಡೆ, ಕಪ್ಪುವಸ್ತ್ರ, ಕ್ಯಾಮರಾ, ರೇಡಿಯೋ, ಸ್ಯೂಟ್‌ಕೇಸ್, ಬ್ಯಾಗ್, ಸಿಗರೇಟ್, ಬೀಡಿ, ಬೆಂಕಿಪೊಟ್ಟಣ, ಅಗ್ನಿಕಾರಕ ವಸ್ತುಗಳನ್ನು ನಿಷೇಧಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು