Categories: ದೇಶ

‘ಕೊರೊನಾ ಲಸಿಕೆಯಿಂದ ಅಡ್ಡ ಪರಿಣಾಮʼ; ಕೋರ್ಟ್ ಮುಂದೆ ಸತ್ಯ ಒಪ್ಪಿಕೊಂಡ ಕಂಪನಿ

ನವದೆಹಲಿ: ಕೊರೊನಾ ಸಮಯದಲ್ಲಿ ಭಾರೀ ಸುದ್ದಿಯಲ್ಲಿದ್ದ ಔಷಧಿಗಳ ತಯಾರಿಕಾ ಸಂಸ್ಥೆ Oxford-AstraZeneca, ಆಘಾತಕಾರಿ ಮಾಹಿತಿ ಒಂದನ್ನು ಕೊನೆಗೂ ಕೋರ್ಟ್​ ಮುಂದೆ ಒಪ್ಪಿಕೊಂಡಿದೆ. ತಾನು ಅಭವೃದ್ಧಿಪಡಿಸಿ ಕೋಟ್ಯಾಂತರ ಜನರಿಗೆ ನೀಡಿರುವ ಕೊರೊನಾ ಲಸಿಕೆಯು ಗಂಭೀರ ಅಡ್ಡಪರಿಣಾಮ ಉಂಟುಮಾಡಬಹುದು ಎಂದು ಮೊದಲ ಬಾರಿಗೆ ಹೇಳಿದೆ.

ಕೋವಿಶೀಲ್ಡ್, ವ್ಯಾಕ್ಸ್​​ಝೇವ್ರಿಯಾ ಬ್ರಾಂಡ್​​ ಹೆಸರಲ್ಲಿ ಕೊರೊನಾ ಲಸಿಕೆಯನ್ನು ಪ್ರಪಂಚದಾದ್ಯಂತ ಅಸ್ಟ್ರಾಝೆನೆಕಾ ಮಾರಾಟ ಮಾಡಿತ್ತು. ಈ ಲಸಿಕೆಯಿಂದ ಟಿಟಿಎಸ್ ನಂತಹ ಅಡ್ಡ ಪರಿಣಾಮ ಉಂಟು ಮಾಡುತ್ತದೆ. ಆದರೆ ಇದು ತುಂಬಾನೇ ಅಪರೂಪ ಎಂದು ಲಂಡನ್ ಕೋರ್ಟ್​ ಮುಂದೆ ಕಂಪನಿ ಹೇಳಿದೆ.

ಟಿಟಿಎಸ್​ ದೇಹದಲ್ಲಿ ರಕ್ತ ಹೆಪ್ಪುಗಟ್ಟುವಂತೆ ಮಾಡುತ್ತದೆ. ಜೊತೆಗೆ ಪ್ಲೇಟ್‌ಲೆಟ್ಸ್​ ದಿನದಿಂದ ದಿನಕ್ಕೆ ಕುಸಿಯಲು ಆರಂಭಿಸುತ್ತದೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಯಿಂದ ಸ್ಟ್ರೋಕ್ ಅಥವಾ ಹೃದಯ ಸ್ತಂಭನದ ಸಾಧ್ಯತೆಗಳು ಹೆಚ್ಚಾಗುತ್ತದೆ.

ಈ ವರ್ಷದ ಫೆಬ್ರವರಿಯಲ್ಲಿ UK ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಈ ವೇಳೆ ಲಸಿಕೆಯ ಅಡ್ಡಪರಿಣಾಮಗಳ ಬಗ್ಗೆ AstraZeneca ಒಪ್ಪಿಕೊಂಡಿದೆ. ಆದರೆ ಕಂಪನಿಯು ಲಸಿಕೆ ಪರವಾಗಿ ತನ್ನ ವಾದಗಳನ್ನು ಮಂಡಿಸಿದೆ.

 

 

Ashitha S

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

6 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

22 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

50 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

58 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

59 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago