ನವದೆಹಲಿ: ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಸಿ ಡಬ್ಲ್ಯುಎಮ್ಎ (ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ) ಆದೇಶಿಸಿದೆ. ಇಂದು ನವದೆಹಲಿಯ ಸಿಡಬ್ಲ್ಯುಎಮ್ಎ ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು, ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನೀರು ಹರಿಸಲು ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಅಲ್ಲದೇ ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆಗೆ ಸಭೆಯಲ್ಲಿ ಖಡಕ್ ಸೂಚನೆ ನೀಡಿದ್ದು, ಸಿಡಬ್ಲ್ಯುಎಮ್ಎ ಆದೇಶ ಮುಂದುವರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಲಾಗಿದೆ. ಸಿಡಬ್ಲ್ಯುಎಮ್ಎ ಈ ಹಿಂದೆ ನೀಡಿದ್ದ ಇದೇ ಆದೇಶವನ್ನು ಸಿಡಬ್ಲ್ಯುಎಮ್ಎ ಎತ್ತಿಹಿಡಿದಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ.