News Karnataka Kannada
Wednesday, April 24 2024
Cricket
ದೇಶ

ಬಕೆಟ್ ಮುಟ್ಟಿದ್ದಕ್ಕೆ ದಲಿತ ಬಾಲಕನ ಮೇಲೆ ಹಲ್ಲೆ

Dalit
Photo Credit : NewsKarnataka

ಜೈಪುರ: ರಾಜಸ್ಥಾನದ ಅಲ್ವಾರ್ ಜಿಲ್ಲೆಯ ರಾಮಗಢ ಪ್ರದೇಶದಲ್ಲಿ ಮೇಲ್ಜಾತಿ ವ್ಯಕ್ತಿಯೊಬ್ಬನ ಬಕೆಟ್ ಮುಟ್ಟಿದ್ದಕ್ಕಾಗಿ ಎಂಟು ವರ್ಷದ ದಲಿತ ಬಾಲಕನನ್ನು ಥಳಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.

ಬಾಲಕನ ತಂದೆ ನೀಡಿದ ದೂರಿನ ಪ್ರಕಾರ, ರತೀರಾಮ್ ಠಾಕೂರ್ ಶನಿವಾರ ಸರ್ಕಾರಿ ಶಾಲೆಯ ಕೈಪಂಪ್ ಬಳಿ ಇಟ್ಟಿದ್ದ ತನ್ನ ಬಕೆಟ್ ಅನ್ನು ಮುಟ್ಟಿದ ಕಾರಣಕ್ಕೆ ಬಾಲಕನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾನೆ.

ಶಾಲೆಯ 4ನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಕೈಪಂಪ್‌ನಿಂದ ನೀರು ತರಲು ಹೋಗಿದ್ದ ವೇಳೆ ಆಕಸ್ಮಿಕವಾಗಿ ಬಕೆಟ್ ಮುಟ್ಟಿದ್ದಾನೆ.

“ತನ್ನ ಬಕೆಟ್ ಅನ್ನು ಮುಟ್ಟಿದ್ದಕ್ಕಾಗಿ ಠಾಕೂರ್ ನನ್ನ ಮಗನನ್ನು ಥಳಿಸಿದ್ದಾನೆ ಎಂದು ಆರೋಪಿಸಿ ಬಾಲಕನ ತಂದೆ ದೂರು ದಾಖಲಿಸಿದ್ದಾರೆ. ದೂರಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ರಾಮಗಢ ಎಸ್‌ಎಚ್‌ಒ ಸವಾಯಿ ಸಿಂಗ್ ಅವರು ಹೇಳಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು