ದೇಶ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ಹೊಸದಿಲ್ಲಿ: 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಶಿಕ್ಷಕನಿಗೆ ಜಾಮೀನು ನೀಡಲು ದಿಲ್ಲಿ ಉಚ್ಚ ನ್ಯಾಯಾಲಯ ನಿರಾಕರಿಸಿದ್ದು, ‘ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ಹೇಳಿದೆ.

ಅಪ್ರಾಪ್ತ ಸಂತ್ರಸ್ತೆಗಿಂತ 22 ವರ್ಷ ದೊಡ್ಡವನಾದ ಆರೋಪಿ, ಶಿಕ್ಷಕನಾಗಿ ತನ್ನ ತನ್ನ ಸ್ಥಾನವನ್ನು ಮರೆತು ಬಾಲಕಿಯನ್ನು ಲೈಂಗಿಕವಾಗಿ ದುರುಪಯೋಗ ಪಡೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಜತೆಗೆ  ಆರೋಪಿ,  ಶಿಕ್ಷಕ-ವಿದ್ಯಾರ್ಥಿ ಸಂಬಂಧದ ಪಾವಿತ್ರ್ಯವನ್ನು ಕಡೆಗಣಿಸಿದ್ದಾನೆ ಎಂದು ನ್ಯಾಯಮೂರ್ತಿ ಸ್ವರಣ ಕಾಂತಾ ಶರ್ಮಾ ಹೇಳಿದರು.

ಆರೋಪಿ ಶಿಕ್ಷಕನ ವಕೀಲರು ಶಿಕ್ಷಣದಲ್ಲಿ ಅವರ ದೀರ್ಘಕಾಲದ ವೃತ್ತಿಜೀವನದ ಆಧಾರದ ಮೇಲೆ ಜಾಮೀನಿಗಾಗಿ ವಾದಿಸಿದಾಗ, ನ್ಯಾಯಾಲಯವು ಈ ವಾದವನ್ನು ತಿರಸ್ಕರಿಸಿತು, ಅವರ ನಡವಳಿಕೆಯು ಬೋಧನಾ ವೃತ್ತಿ ಮತ್ತು ವಿದ್ಯಾರ್ಥಿ-ಶಿಕ್ಷಕ ಸಂಬಂಧದ ಬಗ್ಗೆ ಅಗೌರವ ತೋರಿಸುತ್ತದೆ ಎಂದು ಹೇಳಿದೆ.

ಪಾಠ ಹೇಳಿ ಕೊಡುವ ನೆಪದಲ್ಲಿ ಬಾಲಕಿಯನ್ನು ಪುಸಲಾಯಿಸಿ, ಪದೆ ಪದೇ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಬೇರೆಯವರಲ್ಲಿ ತಿಳಿಸಿದರೆ ಕೊಲ್ಲುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತ ಬಾಲಕಿಯ ಪ್ರಾಸಿಕ್ಯೂಷನ್ ತಿಳಿಸಿದೆ.

ಸಂತ್ರಸ್ತ ಬಾಲಕಿ ಕೊನೆಗೂ ತನ್ನ ಮೇಲಿನ ದೌರ್ಜನ್ಯದ ಕುರಿತು ಶಿಕ್ಷಕಿ ಬಳಿ ಹೇಳಿಕೊಂಡಿದ್ದಾಳೆ. ಇದರಿಂದ ಆರೋಪಿ ಶಿಕ್ಷಕನ ಮೇಲೆ ಕೇಸ್ ದಾಖಲಿಸಲು ಸಾಧ್ಯವಾಗಿದೆ. ” ಇನ್ನು ಬಾಲಕಿಯ ವಯಸ್ಸಿನ ವಿರುದ್ಧ ಹಾಗೂ ನಂಬಿಕೆಯನ್ನು ಮುರಿದು ಕೃತ್ಯ ಎಸಗಿರುವುದಕ್ಕೆ ಆರೋಪಿ ಶಿಕ್ಷಕನಿಗೆ ಜಾಮೀನು ನೀಡಲು ಸಾಧ್ಯವಿಲ್ಲ”ಎಂದು ನ್ಯಾಯಾಲಯ ತಿಳಿಸಿದೆ.

 

Ashitha S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago