News Karnataka Kannada
Wednesday, April 24 2024
Cricket
ದೆಹಲಿ

ಆಮ್ ಆದ್ಮಿ ಪಕ್ಷ ಬೇರ ಪಕ್ಷಗಳ ರೀತಿ ಟೊಳ್ಳು ಭರವಸೆಗಳನ್ನು ಕೊಡುವುದಿಲ್ಲ; ಕೇಜ್ರಿವಾಲ್

ಎಎಪಿ ರಾಜ್ಯದ ಎಲ್ಲಾ 13 ಮತ್ತು ಚಂಡೀಗಢದ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶನಿವಾರ ಘೋಷಿಸಿದ್ದಾರೆ.
Photo Credit :

ನವದೆಹಲಿ : ‘ಆಮ್ ಆದ್ಮಿ ಪಕ್ಷ ಬೇರ ಪಕ್ಷಗಳ ರೀತಿ ಟೊಳ್ಳು ಭರವಸೆಗಳನ್ನು ಕೊಡುವುದಿಲ್ಲ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಪಂಜಾಬ್‌ನಲ್ಲಿ 300 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಅಲ್ಲಿನ ಸರ್ಕಾರ ಘೋಷಿಸಿದ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಟ್ವಿಟರ್‌ನಲ್ಲಿ ಈ ಹೇಳಿಕೆ ಕೊಟ್ಟಿದ್ದಾರೆ.

‘ಪಂಜಾಬ್‌ನಲ್ಲಿ ಆಮ್ ಆದ್ಮಿ ಸರ್ಕಾರ ಭ್ರಷ್ಟಾಚಾರವನ್ನು ಮಟ್ಟಹಾಕಿ ಹಣ ಉಳಿಸುತ್ತದೆ. ಈ ಮೂಲಕ ಅಭಿವೃದ್ಧಿಪರ, ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು’ ಎಂದಿದ್ದಾರೆ.

‘ಆಪ್ ತಾನು ಏನು ಹೇಳುತ್ತದೆ ಅದನ್ನೇ ಮಾಡುತ್ತದೆ, ಬೇರೆ ಪಕ್ಷಗಳ ರೀತಿ ಹುಸಿ ಭರವಸೆಗಳನ್ನು ನಾವು ನೀಡುವುದಿಲ್ಲ’ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಅಲ್ಲದೇ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿರುವ ಪಂಜಾಬ್ ಸಿಎಂ ಭಗವಂತ್ ಮಾನ್‌ರನ್ನು ಅಭಿನಂದಿಸಿದ್ದಾರೆ.

ಪಂಜಾಬ್‌ನಲ್ಲಿ 300 ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿ, ವಾಣಿಜ್ಯ ಬಳಕೆಯ ವಿದ್ಯುತ್ ದರದಲ್ಲಿ ಯಾವುದೇ ಹೆಚ್ಚಳವನ್ನು ಭಗವಂತ್ ಮಾನ್ ಅವರು ಮಾಡಿಲ್ಲ. ಪಂಜಾಬ್ ಚುನಾವಣೆಗೂ ಮುನ್ನ ಉಚಿತ ವಿದ್ಯುತ್ ನೀಡುವುದಾಗಿ ಆಮ್ ಆದ್ಮಿ ಪಕ್ಷ ಭರವಸೆ ನೀಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು