News Karnataka Kannada
Tuesday, April 16 2024
Cricket
ದೆಹಲಿ

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್‌ ಗೆ ಬೆಂಕಿ: ಆಘಾತಕಾರಿ ಘಟನೆ

Indigo
Photo Credit :

ದಿಬ್ರುಗಢ ಹಾಗೂ ದೆಹಲಿ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ನಲ್ಲಿ ಇದ್ದಕ್ಕಿದಂತೆ ಬೆಂಕಿ ಹೊತ್ತಿಕೊಂಡ ಆಘಾತಕಾರಿ ಘಟನೆ ನಡೆದಿದೆ.

ಘಟನೆ ನಡೆಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸಿಬ್ಬಂದಿ ಅಗ್ನಿಶಾಮಕ ಯಂತ್ರವನ್ನು ಬಳಸಿ ಬೆಂಕಿಯನ್ನು ನಂದಿಸಿದ್ದಾರೆ.
ದಿಬ್ರುಗಢದಿಂದ ದೆಹಲಿಗೆ ಬರುತ್ತಿದ್ದ 6E 2037 ವಿಮಾನದಲ್ಲಿ ಈ ಘಟನೆ ಸಂಭವಿಸಿದೆ.

ಪ್ರಯಾಣಿಕಕೊಬ್ರ ಫೋನ್‌ನಿಂದ ಹೊಗೆ ಬರುತ್ತಿರುವುದು ಹಾಗೂ ಕಿಡಿಗಳು ಏಳುತ್ತಿರುವುದನ್ನು ಸಿಬ್ಬಂದಿಯೊಬ್ಬರು ಗಮನಿಸಿದ್ದಾರೆ. ತಕ್ಷಣವೇ ಎಚ್ಚರಿಕೆ ಕ್ರಮಗಳನ್ನು ಕೈಗೊಂಡ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ವಿಮಾನಯಾನ ಸಿಬ್ಬಂದಿಗೆ ಇಂತಹ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ತರಬೇತಿ ನೀಡಲಾಗಿದೆ. ಮತ್ತು ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿಯಂತ್ರಣಕ್ಕೆ ತಂದಿದ್ದಾರೆ ಯಾವುದೇ ಹಾನಿ ಸಂಭವಿಸಿಲ್ಲ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಹಾಗೂ ಕ್ಯಾಬಿನ್ ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಇಂಡಿಗೋ ಸಂಸ್ಥೆ ತಿಳಿಸಿದೆ.

ಬಳಿಕ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು