News Karnataka Kannada
Monday, April 15 2024
Cricket
ದೆಹಲಿ

ಪ್ರಧಾನಿಯವರ ಸಲಹೆಗಾರರಾಗಿ ತರುಣ್ ಕಪೂರ್ ನೇಮಕ

Untitled 5
Photo Credit :

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

ತರುಣ್ ಕಪೂರ್ ಅವರು ಹಿಮಾಚಲ ಪ್ರದೇಶ ಕೇಡರ್‌ ನ 1987-ಬ್ಯಾಚ್‌ ನ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು.

ನವೆಂಬರ್ 30, 2021 ರಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಸಂಪುಟ ನೇಮಕಾತಿ ಸಮಿತಿಯು ತರುಣ್ ಕಪೂರ್ ಅವರನ್ನು ಪ್ರಧಾನ ಮಂತ್ರಿಗಳ ಸಲಹೆಗಾರರಾಗಿ, ಪ್ರಧಾನ ಮಂತ್ರಿ ಕಚೇರಿಯಲ್ಲಿ, ಭಾರತ ಸರ್ಕಾರದ ಕಾರ್ಯದರ್ಶಿಯ ಶ್ರೇಣಿಯಲ್ಲಿ ಎರಡು ವರ್ಷಗಳ ಅವಧಿಗೆ ನೇಮಕ ಮಾಡಲು ಅನುಮೋದಿಸಿದೆ ಎಂದು ಸಿಬ್ಬಂದಿ ಸಚಿವಾಲಯ ಹೇಳಿದೆ.

ಇನ್ನೂ ಹಿರಿಯ ಅಧಿಕಾರಿಗಳಾದ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಪ್ರಧಾನಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ ಎನ್ನುವುದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು