News Karnataka Kannada
Thursday, April 25 2024
ದೆಹಲಿ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 2 ಕೋಟಿ ಮನೆ ನಿರ್ಮಾಣ

Pm Modi
Photo Credit :

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ 3 ಕೋಟಿಗೂ ಹೆಚ್ಚು ಕಾಂಕ್ರೀಟ್ ಮನೆಗಳನ್ನು ಸರ್ಕಾರ ನಿರ್ಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ.

ಈ ಯೋಜನೆ ಬಡವರ ಸಬಲೀಕರಣ ಮತ್ತು ಮಹಿಳಾ ಸಬಲೀಕರಣದ ಸಂಕೇತವಾಗಿದೆ ಎಂದು ಅವರು ಹೇಳಿದ್ದಾರೆ.ಭಾರತೀಯರ ಸಹಕಾರದಿಂದ ಮಾತ್ರ ಮೂರು ಕೋಟಿಗೂ ಹೆಚ್ಚು ನಿರ್ಮಿಸಲು ಸಾಧ್ಯವಾಗಿದೆ. ಮೂಲ ಸೌಕರ್ಯಗಳಿರುವ ಈ ಮನೆಗಳು ಇಂದು ಮಹಿಳಾ ಸಬಲೀಕರಣದ ಸಂಕೇತವಾಗಿ ಮಾರ್ಪಟ್ಟಿವೆ ಎಂದು ತಿಳಿಸಿದ್ದಾರೆ.

ಟ್ವಿಟರ್‌ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಪ್ರಧಾನಿ, ದೇಶದ ಪ್ರತಿ ಬಡ ಕುಟುಂಬಕ್ಕೆ ಪಕ್ಕಾ ಮನೆಯನ್ನು ಒದಗಿಸುವ ನಮ್ಮ ಸಂಕಲ್ಪದಲ್ಲಿ ನಾವು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದೇವೆ.

2015 ರಲ್ಲಿ ಪ್ರಾರಂಭವಾದ, ಪ್ರಧಾನ ಮಂತ್ರಿ ಆವಾಸ್ ಯೋಜನೆ(ಗ್ರಾಮೀಣ), ದೇಶದ ಬಡ ಜನಸಂಖ್ಯೆಗೆ ‘ಪಕ್ಕಾ’ ಮನೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. 31 ಮಾರ್ಚ್ 2022 ರೊಳಗೆ 2 ಕೋಟಿ ಕೈಗೆಟುಕುವ ಮನೆಗಳನ್ನು ನಿರ್ಮಿಸುವ ಗುರಿಯೊಂದಿಗೆ ಯೋಜನೆ ಪ್ರಾರಂಭಿಸಲಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2.52 ಕೋಟಿ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಇದಕ್ಕಾಗಿ 1.95 ಲಕ್ಷ ಕೋಟಿ ರೂ. ವೆಚ್ಚ ಮಾಡಲಾಗಿದೆ.

ಪ್ರಧಾನಮಂತ್ರಿ ಆವಾಸ್ ಯೋಜನೆ(ನಗರ) ಅಡಿಯಲ್ಲಿ ಇದುವರೆಗೆ 58 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ. ಇದಕ್ಕಾಗಿ 1.18 ಲಕ್ಷ ಕೋಟಿ ರೂ. ವೆಚ್ಚವಾಗಿದೆ.

ಪ್ರತಿ ಮನೆಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಂಪರ್ಕ, ನೀರಿನ ಸಂಪರ್ಕ ಮತ್ತು ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತದೆ. ಪ್ರಧಾನಮಂತ್ರಿ ಆವಾಸ್ ಯೋಜನಾ ಅರ್ಬನ್ ವೆಬ್‌ಸೈಟ್ ಪ್ರಕಾರ, ಕೇಂದ್ರದಿಂದ ಇದುವರೆಗೆ ಸುಮಾರು 122.69 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು