News Karnataka Kannada
Monday, April 22 2024
Cricket
ದೆಹಲಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 72 ವರ್ಷಗಳಲ್ಲಿಯೇ ಗರಿಷ್ಠ ತಾಪಮಾನ ದಾಖಲು

Heat Wave
Photo Credit :

ನವದೆಹಲಿ: ರಾಷ್ಟ್ರ ರಾಜಧಾನಿ ಏಪ್ರಿಲ್ 9 ರಂದು ಗರಿಷ್ಠ ತಾಪಮಾನ 42.4 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ.ಇದು ದೆಹಲಿಯಲ್ಲಿ 1950 ರ ಬಳಿಕ ಏಪ್ರಿಲ್‌ನಲ್ಲಿ ದಾಖಲಾದ ಗರಿಷ್ಠ ತಾಪಮಾನವಾಗಿದೆ.

ಶನಿವಾರದ ಗರಿಷ್ಠ ತಾಪಮಾನವು ವರ್ಷದ ಈ ಸಮಯದಲ್ಲಿ ಸಾಮಾನ್ಯಕ್ಕಿಂತ ಎಂಟು ಡಿಗ್ರಿಗಳಷ್ಟು ಹೆಚ್ಚಾಗಿದೆ. , ಹವಾಮಾನ ಇಲಾಖೆಯು ಭಾನುವಾರದಂದು ರಾಷ್ಟ್ರ ರಾಜಧಾನಿಗೆ ಆರೆಂಜ್ ಅಲರ್ಟ್ ನೀಡಿದೆ ಮತ್ತು ತೀವ್ರತರವಾದ ಶಾಖದ ಪರಿಸ್ಥಿತಿಗಳು ಈ ಪ್ರದೇಶದಲ್ಲಿ ಮುಂದುವರಿಯುವ ನಿರೀಕ್ಷೆಯಿದೆ ಎಂದು ಎಚ್ಚರಿಕೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ 72 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಏಪ್ರಿಲ್ ಮೊದಲಾರ್ಧದಲ್ಲಿ ದೆಹಲಿಯಲ್ಲಿ ಇಷ್ಟು ಹೆಚ್ಚಿನ ತಾಪಮಾನ ದಾಖಲಾಗಿದೆ ಎಂದು ಹೇಳಿದೆ.

ಬಿಸಿಗಾಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಐಎಮ್‌ಡಿ ಅಧಿಕಾರಿಗಳು ಸುದೀರ್ಘ ಶುಷ್ಕ ವಾಯುವ್ಯ ಭಾರತದಲ್ಲಿ ತೀವ್ರ ಬಿಸಿ ವಾತಾವರಣಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು