News Karnataka Kannada
Monday, April 22 2024
Cricket
ದೆಹಲಿ

ಶ್ರೀರಂಗಪಟ್ಟಣ- ಸಿ.ಆರ್‍.ಪಟ್ಟಣ ಹೆದ್ದಾರಿ ಉನ್ನತೀಕರಣಕ್ಕೆ ಮನವಿ

Nitin
Photo Credit :

ದೆಹಲಿ: ಶ್ರೀರಂಗಪಟ್ಟಣ- ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು  ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹೆದ್ದಾರಿಯ ಉನ್ನತೀಕರಣಕ್ಕೆ ಮನವಿ ಮಾಡಿದ್ದಾರೆ.

ಬುಧವಾರ ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು, ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಉನ್ನತ್ತಿಕರಿಸಲು ಮನವಿ ಮಾಡಿದ್ದು, ಇದಕ್ಕೆ  ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಈ ಕುರಿತಂತೆ ಮಾತನಾಡಿರುವ ಸಚಿವ ಡಾ.ನಾರಾಯಣಗೌಡ ಅವರು  ಶ್ರೀರಂಗಪಟ್ಟಣ- ಕೆಆರ್ ಪೇಟೆ- ಚನ್ನರಾಯಪಟ್ಟಣ- ಅರಸೀಕೆರೆ ರಸ್ತೆ ಶಿವಮೊಗ್ಗ, ಮೈಸೂರು ನಗರಗಳಿಗೆ ಸಂಪರ್ಕ ಕಲ್ಪಿಸಲಿದ್ದು, ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ಹಾಗಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕು ಎಂದು ಮನವಿ ಮಾಡಿದ್ದೇನೆ. ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು ಭಾರತ್ ಮಾಲಾ -2 ಯೋಜನೆಯಡಿ ಇದನ್ನು ಪರಿಗಣಿಸುವುದಾಗಿ ತಿಳಿಸಿದ್ದಾರೆ. ಇದರಿಂದ ಮಂಡ್ಯ, ಹಾಸನ, ಶಿವಮೊಗ್ಗ,ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ  ಎಂದು ಸಚಿವರು  ತಿಳಿಸಿದ್ದಾರೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕರ್ನಾಟಕದ ಹಿರಿಯ ಸಾಹಿತಿ ಎಸ್ ಎಲ್ ಬೈರಪ್ಪ ಅವರ ಪರ್ವ ಕಾದಂಬರಿ ಇಂಗ್ಲೀಷ್ ಅನುವಾದಿತ ಪ್ರತಿಯನ್ನು ಸಚಿವ ಡಾ.ನಾರಾಯಣಗೌಡ ಅವರು ಉಡುಗೊರೆಯಾಗಿ ನೀಡಿದರು. ಈ ವೇಳೆ ಕುತೂಹಲಭರಿತರಾಗಿ ಕಾದಂಬರಿ ಬಗ್ಗೆ ಮಾಹಿತಿ ಪಡೆದ ಕೇಂದ್ರ ಸಚಿವರು, ಇದನ್ನು ಖಂಡಿತವಾಗಿ ಓದುತ್ತೇನೆ ಎಂದು ಭರವಸೆ ನೀಡಿದರು ಎಂದು ಹೇಳಲಾಗಿದೆ.

ಭೇಟಿಯ ಸಂದರ್ಭ ಸಚಿವ ಡಾ.ನಾರಾಯಣಗೌಡ ಅವರ ಆಪ್ತ ಕಾರ್ಯದರ್ಶಿ ಹೆಚ್ ಜಿ ಪ್ರಭಾಕರ್ ಅವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು