News Karnataka Kannada
Friday, May 03 2024
ದೆಹಲಿ

ಅಖಿಲೇಶ್ ಯಾದವ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್

Akhilesh Yadav
Photo Credit :

ನವದೆಹಲಿ : ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ವಿರುದ್ಧ ಪ್ರಕರಣ ದಾಖಲಾಗಿದೆ. ಕನೌಜ್ ಜಿಲ್ಲೆಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಎಫ್‌ಐಆರ್‌ನಲ್ಲಿ ಜುಕರ್‌ಬರ್ಗ್ ಹೊರತಾಗಿ 49 ಮಂದಿಯನ್ನು ಹೆಸರಿಸಲಾಗಿದೆ.ಅಖಿಲೇಶ್ ಯಾದವ್ ವಿರುದ್ಧ ಸ್ವತಃ ಜುಕರ್‌ಬರ್ಗ್ ಯಾವುದೇ ಅವಹೇಳನಕಾರಿ ಪೋಸ್ಟ್ ಹಾಕಿಲ್ಲ. ಯಾದವ್ ವಿರುದ್ಧ ಅವಹೇಳನಕಾರಿ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಲು ಅವರ facebook ವೇದಿಕೆಯನ್ನು ಬಳಸಿದ್ದರಿಂದ ಎಫ್‌ಐಆರ್ ನಲ್ಲಿ ಅವರ ಹೆಸರಿದೆ.ಅಖಿಲೇಶ್ ಯಾದವ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕಾಗಿ ಕನೌಜ್ ಜಿಲ್ಲೆಯ ಸರಹತಿ ಗ್ರಾಮದ ನಿವಾಸಿ ಅಮಿತ್ ಕುಮಾರ್ ಅವರು ಜುಕರ್‌ಬರ್ಗ್ ಮತ್ತು ಇತರ 49 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

‘ಬುವಾ ಬಾಬುವಾ’ ಶೀರ್ಷಿಕೆಯ ಫೇಸ್‌ಬುಕ್ ಪುಟದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥರ ಇಮೇಜ್‌ಗೆ ಕಳಂಕ ತರುವ ಪ್ರಯತ್ನವನ್ನು ಮಾಡಲಾಗಿದೆ ಎಂದು ಕುಮಾರ್ ನ್ಯಾಯಾಲಯದ ಮುಂದೆ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಿದ್ದಾರೆ.ಕುಮಾರ್ ಅವರು ಮೇ 25 ರಂದು ಪೊಲೀಸ್ ವರಿಷ್ಠಾಧಿಕಾರಿಗೆ ಅರ್ಜಿಯನ್ನು ಕಳುಹಿಸಿದ್ದರು. ಆದರೆ ಅವರ ಅರ್ಜಿ ನೆನೆಗುದಿಗೆ ಬಿದ್ದಿತ್ತು. ಅದರ ನಂತರ, ಅವರು ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಸಿಇಒ ಜುಕರ್‌ಬರ್ಗ್ ಜೊತೆಗೆ ಫೇಸ್‌ಬುಕ್ ಪುಟದ ಅಡ್ಮಿನ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯ ನ್ಯಾಯಧೀಶ ಮ್ಯಾಜಿಸ್ಟ್ರೇಟ್ ಧರಂವೀರ್ ಸಿಂಗ್ ಅವರು ಕುಮಾರ್ ಅವರ ಆದೇಶದ ಮೇರೆಗೆ ಪ್ರಕರಣವನ್ನು ದಾಖಲಿಸುವಂತೆ ಪೊಲೀಸರಿಗೆ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು