News Karnataka Kannada
Monday, April 29 2024
ದೆಹಲಿ

ಅಡುಗೆ ಅನಿಲ ಸಿಲಿಂಡರ್ ತೂಕ ಕಡಿಮೆ ಮಾಡಲಿರುವ ಸರ್ಕಾರ

Bengaluru: A cylinder for commercial use will be reduced to a small extent from today
Photo Credit :

ನವದೆಹಲಿ : ಎಲ್‌ಪಿಜಿ (LPG) ಗ್ರಾಹಕರಿಗೆ ಮಹತ್ವದ ಸುದ್ದಿ ಇದು. ಇನ್ನು ಅಡುಗೆ ಅನಿಲ ಸಿಲಿಂಡರ್ ತೂಕ ಕಡಿಮೆಯಾಗಬಹುದು. LPG ಸಿಲಿಂಡರ್‌ಗಳು ಭಾರವಾಗಿದ್ದು, ಅವುಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಲು ಕಷ್ಟವಾಗುತ್ತದೆ. ಅದರಲ್ಲೂ ಮಹಿಳೆಯರು ಗ್ಯಾಸ್ ಸಿಲಿಂಡರ್ (Gas cylinder) ಕೊಂಡೊಯ್ಯಲು ತೊಂದರೆ ಅನುಭವಿಸುತ್ತಿದ್ದಾರೆ. ಸಿಲಿಂಡರ್ ತೂಕ ಕಡಿಮೆಯಾದರೆ ಜನಸಾಮಾನ್ಯರಿಗೆ ಇದರಿಂದ ಪ್ರಯೋಜನವಾಗಲಿದೆ.

ಜನರ ಅನುಕೂಲಕ್ಕಾಗಿ, ಗ್ಯಾಸ್ ಸಿಲಿಂಡರ್ (Gas cylinder) ಹಗುರವಾಗಿರುವುದು ಅವಶ್ಯಕ. ಗ್ಯಾಸ್ ಸಿಲಿಂಡರ್ ಅನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಬೇಕಾದರೆ ಸಮಸ್ಯೆಗಳು ಉಂಟಾಗುತ್ತದೆ. ಆದರೆ, ಶೀಘ್ರದಲ್ಲೇ ಸರ್ಕಾರವು ಮಹಿಳೆಯರ ಅನುಕೂಲಕ್ಕಾಗಿ ಎಲ್‌ಪಿಜಿ (LPG) ಸಿಲಿಂಡರ್‌ಗಳ ತೂಕವನ್ನು ಕಡಿಮೆ ಮಾಡಬಹುದು.

ಗಮನಾರ್ಹ ಅಂಶವೆಂದರೆ 14.2 ಕೆಜಿಯಷ್ಟು ಅಡುಗೆ ಅನಿಲ ಸಿಲಿಂಡರ್ ಗಳ ತೂಕದಿಂದಾಗಿ ಅದರ ಸಾಗಣೆಯಲ್ಲಿ ಸಮಸ್ಯೆ ಉಂಟಾಗುತ್ತದೆ. ಇದರಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ತನ್ನ ತೂಕವನ್ನು ಕಡಿಮೆ ಮಾಡುವ ಬಗ್ಗೆ ಹಲವು ಆಯ್ಕೆಗಳನ್ನು ಪರಿಗಣಿಸುತ್ತಿದೆ. ಈ ಬಗ್ಗೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri), ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ. ಇದಕ್ಕೂ ಮುನ್ನ ಸದಸ್ಯರೊಬ್ಬರು ಭಾರವಾದ ಸಿಲಿಂಡರ್‌ಗಳಿಂದ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು.

ಕೇಂದ್ರ ಸಚಿವರು ನೀಡಿರುವ ಮಾಹಿತಿ :
ಈ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಹರ್ದೀಪ್ ಸಿಂಗ್ ಪುರಿ, ‘ಮಹಿಳೆಯರು ಮತ್ತು ಹೆಣ್ಣುಮಕ್ಕಳು ಸಿಲಿಂಡರ್‌ನ (LPG)  ಹೆಚ್ಚಿನ ತೂಕವನ್ನು ತಾವೇ ಹೊರುವುದು ನಮಗೆ ಇಷ್ಟವಿಲ್ಲ, ಹಾಗಾಗಿ ಅದರ ತೂಕವನ್ನು ಕಡಿಮೆ ಮಾದುವ ಬಗ್ಗೆ ಚಿಂತಿಸಲಾಗುತ್ತಿದೆ’ ಎಂದು ಹೇಳಿದರು. 14.2 ಕೆ.ಜಿ ತೂಕವನ್ನು 5 ಕೆ.ಜಿ.ಗೆ ಇಳಿಸುವುದಾಗಲಿ ಅಥವಾ ಇನ್ನಾವುದಾದರೂ ಮಾರ್ಗವನ್ನಗಲಿ ಕಂಡುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು