News Karnataka Kannada
Tuesday, May 07 2024
ದೆಹಲಿ

ಅತ್ಯಾಚಾರ ಸಂತ್ರಸ್ಥೆ ಕುಟುಂಬದ ಗುರುತು ಬಹಿರಂಗ ; ರಾಹುಲ್‌ ಗಾಂಧಿ ವಿರುದ್ದ ದೂರು

Rahul Gandhi Dt 19 6 21 No1962118 Newsk 1247494964
Photo Credit :

ನವದೆಹಲಿ : ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾಗಿದ್ದ ದೆಹಲಿಯ 9 ವರ್ಷದ ಬಾಲಕಿಯ ಪೋಷಕರ ಫೋಟೋವನ್ನು ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊಂಡು ಸಂತ್ರಸ್ತೆಯ ಕುರಿತ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ದೆಹಲಿಯ ವಕೀಲ ವಿನೀತ್​ ಜಿಂದಾಲ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಹುಲ್​ ಗಾಂಧಿ ಅವರ ಈ ವರ್ತನೆ ಅಪರಾಧವಾಗಿದೆ. ಅಲ್ಲದೇ ಪೋಕ್ಸೊ ಕಾಯ್ದೆ ಸೆಕ್ಷನ್​ 23, ಬಾಲ ನ್ಯಾಯ 74, 228ಎ ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಅಪರಾಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಂತ್ರಸ್ತ ಕುಟುಂಬದ ಮಾಹಿತಿ ಬಿಟ್ಟುಕೊಟ್ಟ ಹಿನ್ನಲೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್​ಸಿಪಿಸಿಆರ್​) ಕೂಡ ಮಂಗಳವಾರ ಟ್ವಿಟರ್​ ಇಂಡಿಯಾಗೆ ನೋಟಿಸ್​ ಜಾರಿ ಮಾಡಿತ್ತು. ಅಲ್ಲದೇ ಪೋಕ್ಸೊ ಕಾಯ್ದೆಯನ್ನು ಉಲ್ಲಂಘಿಸಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರು ಟ್ವಿಟ್​ ಮಾಡಿದ್ದು, ಅವರ ವಿರುದ್ಧ ಕ್ರಮ ಕೈ ಗೊಳ್ಳುವಂತಎ ಎನ್​ಸಿಪಿಸಿಆರ್​ ಟ್ವಿಟರ್​ ಇಂಡಿಯಾಕ್ಕೆ ತಿಳಿಸಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ರಾಹುಲ್​ ಗಾಂಧಿ ವಿರುದ್ಧ ದೂರು ದಾಖಲಾಗಿದೆ.
ಈ ಪ್ರಕರಣ ಕುರಿತು ಟ್ವೀಟ್​ ಮಾಡಿರುವ ಎನ್‌ಸಿಪಿಸಿಆರ್‌ನ ಅಧ್ಯಕ್ಷೆ ಪ್ರಿಯಾಂಕ್ ಕನೂಂಗೊ, ಈ ಕುರಿತು ಅರಿವಿಗೆ ಬರುತ್ತಿದ್ದಂತೆ ಮಕ್ಕಳ ಹಕ್ಕುಗಳ ಸಂಸ್ಥೆಯು ಕ್ರಮ ಕೈ ಗೊಂಡಿದೆ, ಸಂತ್ರಸ್ತೆ ಪೋಷಕರ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ರಾಹುಲ್​ ಗಾಂಧಿ ನಿಯಮ ಉಲ್ಲಂಘಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ದೆಹಲಿಯಲ್ಲಿ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮತ್ತು ಧಾರ್ಮಿಕ ಕ್ಷೇತ್ರದಲ್ಲಿದ್ದ ಓರ್ವ ವ್ಯಕ್ತಿ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದರು. ಈ ಘಟನೆ ಕುರಿತು ಪೊಲೀಸರು ಸೆಕ್ಷನ್​ 302, 376, 506 ಅಡಿ ಮತ್ತು ಪೋಸ್ಕೊ, ಎಸ್​ ಸಿ/ ಎಸ್​ ಟಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು