ಹೊಸದಿಲ್ಲಿ: ದೇಶದಲ್ಲಿ ಒಮಿಕ್ರಾನ್ ರೂಪಾಂತರಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಅದಕ್ಕೆ ಪೂರಕವಾಗಿ ಲಸಿಕೆ ಹಾಕಿಸಿಕೊಳ್ಳು ವವರ ಸಂಖ್ಯೆಯೂ ಹೆಚ್ಚಾಗತೊಡಗಿದೆ.ದೇಶದಲ್ಲಿ 127.61 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದೂ ಅವರು ಬರೆದುಕೊಂಡಿದ್ದಾರೆ. ಶೇ.84.8 ಮಂದಿ 18 ವರ್ಷ ಮೇಲ್ಪಟ್ಟವರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಅದಕ್ಕಾಗಿ 1,32,44,514 ಸೆಷನ್ಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ರವಿವಾರಕ್ಕೆ ಮುಕ್ತಾಯವಾದಂತೆ ದೇಶದಲ್ಲಿ 18 ವರ್ಷ ಮೇಲ್ಪಟ್ಟವರ ಒಟ್ಟು ಸಂಖ್ಯೆಯ ಶೇ.50ರಷ್ಟು ಮಂದಿಗೆ ಪೂರ್ಣ ಪ್ರಮಾಣದಲ್ಲಿ ಲಸಿಕೆ ಹಾಕಲಾಗಿದೆ.ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಹಿನ್ನೆಲೆಯಲ್ಲಿ ಜ.16ರಂದು 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆರಂಭಿಸಲಾಗಿತ್ತು. ಕೇವಲ 11 ತಿಂಗಳಲ್ಲಿ ಪ್ರಾಪ್ತ ವಯಸ್ಕರ ಪೈಕಿ ಶೇ.50ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ ಎಂದು ಸಚಿವ ಮನ್ಸುಖ್ ಮಾಂಡವೀಯಾ ಟ್ವೀಟ್ನಲ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮಾ.1ರಿದ 60 ವರ್ಷ ಮೇಲ್ಪಟ್ಟ ವರಿಗೆ ಮತ್ತು ಎ.1ರಿಂದ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಿಸುವ ಕಾರ್ಯಕ್ರಮ ಕೈಗೆತ್ತಿಕೊಳ್ಳಲಾಗಿತ್ತು.