News Karnataka Kannada
Friday, May 03 2024
ದೆಹಲಿ

ಇಂದಿನಿಂದ ಮೂರು ದಿನ ಫಿಲಿಪೈನ್ಸ್‌ ಪ್ರವಾಸದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್

Jai Shankar
Photo Credit :

ಹೊಸದಿಲ್ಲಿ: ಇಂದಿನಿಂದ ಮೂರು ದಿನಗಳ ಕಾಲ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌ ಫಿಲಿಪೈನ್ಸ್‌ ಪ್ರವಾಸ ಕೈಗೊಳ್ಳಲಿದ್ದಾರೆ.ವಿದೇಶಾಂಗ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಫಿಲಿಪೈನ್ಸ್‌ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಈ ಪ್ರವಾಸದಲ್ಲಿ ಉಭಯ ರಾಷ್ಟ್ರಗಳ ನಡುವಿನ ಪ್ರದೇಶಿಕ ಹಾಗೂ ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಸಚಿವಾಲಯ ತಿಳಿಸಿದೆ.

ಈ ವೇಳೆ ಅವರು ಫಿಲಿಪೈನ್ಸ್‌ನ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಟಿಯೊಡೊರೊ ಎಲ್.ಲೊಕ್ಸಿನ್ ಜೂನಿಯರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಜತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.ಈ ಹಿಂದೆ 2020ರಲ್ಲಿ ನಡೆದ ದ್ವಿಪಕ್ಷೇಯ ಸಹಕಾರದ ಮೇಲೆ ಜಂಟಿ ಆಯೋಗದ ಸಭೆಯಲ್ಲಿ ಫಿಲಿಪೈನ್ಸ್‌ ಹಾಗೂ ಭಾರತ ಭಾಗಿಯಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು