News Karnataka Kannada
Friday, May 03 2024
ದೆಹಲಿ

ಇಂದಿನಿಂದ 15 ರಿಂದ 18 ವರ್ಷ ವಯಸ್ಸಿನವರಿಗೆ ಲಸಿಕೆ ಆಭಿಯಾನ

Vaccine
Photo Credit :

ನವದೆಹಲಿ:  15-18 ವರ್ಷ ವಯಸ್ಸಿನ ಯುವ ಪೀಳಿಗೆಗೆ ಇಂದಿನಿಂದ(ಜ3) ಕೊರೊನಾ ಲಸಿಕೆ ಹಾಕುವ ಪ್ರಕ್ರಿಯೆ ನಡೆಯಲಿದೆ. ಈ ವಯೋಮಿತಿಯವತಿಗೆ ಪ್ರತ್ಯೇಕ ಮೀಸಲಾದ ಕೋವಿಡ್-19 ಲಸಿಕೆ ಕೇಂದ್ರಗಳನ್ನು ಸ್ಥಾಪಿಸಲು ಕೇಂದ್ರವು ರಾಜ್ಯಗಳಿಗೆ ಸಲಹೆ ನೀಡಿದೆ, ಆದರೆ ಪ್ರತ್ಯೇಕ ಲಸಿಕೆ ತಂಡ ಮತ್ತು ಎಲ್ಲಾ ಇತರ ಸಿವಿಸಿಗಳಲ್ಲಿ ಪ್ರತ್ಯೇಕ ಸರತಿ ಸಾಲುಗಳನ್ನು ನಿರ್ವಹಿಸಬೇಕಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 25, 2021 ರಂದು ತಮ್ಮ ಭಾಷಣದಲ್ಲಿ 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 3, 2022ರಿಂದ ಕೋವಿಡ್-19 ವಿರುದ್ಧ ಲಸಿಕೆಯನ್ನು ಪಡೆಯಲು ಪ್ರಾರಂಭಿಸುತ್ತಾರೆ ಮತ್ತು ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಜನವರಿ 10ರಿಂದ ಮುನ್ನೆಚ್ಚರಿಕೆಯ ಪ್ರಮಾಣವನ್ನು (ಬೂಸ್ಟರ್ ಡೋಸ್) ಸ್ವೀಕರಿಸಲು ಪ್ರಾರಂಭಿಸುತ್ತಾರೆ ಎಂದು ಘೋಷಿಸಿದರು.

ಭಾನುವಾರ ದೇಶದಲ್ಲಿ 27,553 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಓಮಿಕ್ರಾನ್ ಪ್ರಕರಣಗಳ ಸಂಖ್ಯೆ 1,525 ಆಗಿದೆ. ದೆಹಲಿ, ಮಹಾರಾಷ್ಟ್ರ, ಗುಜರಾತ್, ತಮಿಳುನಾಡು ಮತ್ತು ಕೇರಳದಲ್ಲಿ ಹೆಚ್ಚು ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ.

ಭಾರತ್ ಬಯೋಟೆಕ್‌ನ ಕೋವಾಕ್ಸಿನ್, 12ರಿಂದ 18 ವರ್ಷದೊಳಗಿನ ತುರ್ತು ಪರಿಸ್ಥಿತಿಯಲ್ಲಿ ನಿರ್ಬಂಧಿತ ಬಳಕೆಗಾಗಿ ಅನುಮೋದನೆಯನ್ನು ನೀಡಲಾಗಿದೆ, ಇದು ಮಕ್ಕಳಿಗೆ ಲಭ್ಯವಿರುವ ಏಕೈಕ ಲಸಿಕೆಯಾಗಿದೆ.

ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೂಸ್ಟರ್ ಡೋಸ್ ಬಗ್ಗೆ ಸಹ ಚರ್ಚೆ ನಡೆಯುತ್ತಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಸಹ ಘೋಷಣೆ ಮಾಡಿದ್ದಾರೆ. ಕೊರೊನಾ ವಾರಿಯರ್‌ಗಳು, ಆರೋಗ್ಯರಕ್ಷಣಾ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಈಗಲೂ ತಮ್ಮ ಬಹು ಸಮಯವನ್ನು ಕೊರೊನಾ ರೋಗಿಗಳಿಗೆ ಸೇವೆ ಮಾಡುವುದರಲ್ಲಿ ಕಳೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು