ದೆಹಲಿ

ಇಂದು ಏರ್ ಇಂಡಿಯಾ ಅಧಿಕೃತವಾಗಿ ಟಾಟಾ ಗ್ರೂಪ್ ತೆಕ್ಕೆಗೆ

ನವದೆಹಲಿ: ಕೇಂದ್ರ ಸರ್ಕಾರ ಏರ್ ಇಂಡಿಯಾವನ್ನು ಟಾಟಾಗ್ರೂಪ್‍ಗೆ ಇಂದು ಹಸ್ತಾಂತರಿಸಲಿದೆ. ಸುಮಾರು 69 ವರ್ಷಗಳ ಹಿಂದೆ ಭಾರತ ಸರ್ಕಾರ ವಿಮಾನಯಾನವನ್ನು ಟಾಟಾಗ್ರೂಪ್ ಸಮೂಹದಿಂದ ತನ್ನ ಅಧೀನಕ್ಕೆ ತೆಗೆದುಕೊಂಡಿತ್ತು. ಇದೀಗ ಮತ್ತೆ ಏರ್ ಇಂಡಿಯಾವನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸಲಾಗುತ್ತಿದೆ.ಹಸ್ತಾಂತರ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ವಿಮಾನಯಾನವನ್ನು ಟಾಟಾ ಸಮೂಹಕ್ಕೆ ಇಂದು ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಅ.8ರಂದು ನಡೆದ ಹರಾಜು ಪ್ರಕ್ರಿಯೆಯಲ್ಲಿ ಏರ್ ಇಂಡಿಯಾ ಟೇಲ್ಸ್ ಪ್ರೈ.ಲಿ.ಗೆ 18 ಸಾವಿರ ಕೋಟಿ ರೂ.ಗೆ ಕೇಂದ್ರ ಸರ್ಕಾರ ಮಾರಾಟ ಮಾಡಿತ್ತು. ಇದು ಟಾಟಾಗ್ರೂಪ್‍ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾಗಿದೆ.

ಈ ನಡುವೆ ಏರ್‍ಲೈನ್ಸ್ ಪೈಲೆಟ್ ಯೂನಿಯನ್‍ಗಳಾದ ಇಂಡಿಯನ್ ಪೈಲೆಟ್ಸ್ ಗಿಲ್ಡ್ (ಐಪಿಜಿ) ಮತ್ತು ಇಂಡಿಯನ್ ಕಮರ್ಷಿಯಲ್ ಪೈಲೆಟ್ ಅಸೋಸಿಯೇಷನ್ ಏರ್ ಇಂಡಿಯಾ (ಐಸಿಪಿಎ) ವ್ಯವಸ್ಥಾಪಕ ನಿರ್ದೇಶಕರಾದ ವಿಕ್ರಂ ದೇವ್‍ದತ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

ಪೈಲೆಟ್‍ಗಳ ಬಾಕಿ ಮೊತ್ತವನ್ನು ತಕ್ಷಣವೇ ಪಾವತಿಸಬೇಕೆಂದು ಒತ್ತಾಯಿಸಿವೆ. ವಿಮಾನ ಹಾರಾಟಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಪೈಲೆಟ್‍ಗಳ ಬಾಡಿಮಾಸ್ ಇಂಡೆಕ್ಸ್ ಅಳೆಯುವ ಕಂಪೆನಿಯು ಆದೇಶವನ್ನು ಇತರ ಎರಡೂ ಒಕ್ಕೂಟಗಳು ವಿರೋಧಿಸಿವೆ.

ಏರ್ ಇಂಡಿಯಾ ಎಂಪ್ಲಾಯ್ಸ್ ಯೂನಿಯನ್ ಮತ್ತು ಆಲ್ ಇಂಡಿಯಾ ಕ್ಯಾಬಿನ್ ಕ್ರೂ ಅಸೋಸಿಯೇಷನ್ ಈ ಆದೇಶವನ್ನು ವಿರೋಧಿಸಿ ಪತ್ರ ಬರೆದಿವೆ. ಇದು ಅಮಾನವೀಯ ಹಾಗೂ ನಾಗರಿಕ ವಿಮಾನಯಾನ ನಿರ್ದೇಶನಾಲಯದ ನಿಯಮಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

ಕಳೆದ ಸಾಲಿನ ಅ.7ರಂದು ಏರ್ ಇಂಡಿಯಾದ ಮಾರಾಟ ಘೋಷಣೆಯ ಮೂರು ದಿನಗಳ ನಂತರ ಟಾಟಾ ಸಮೂಹಕ್ಕೆ ಎಲ್‍ಒಐ ಜಾರಿ ಮಾಡಲಾಗಿದ್ದು, ಅದರಲ್ಲಿ ಸರ್ಕಾರವು ತನ್ನ ನೂರು ಪ್ರತಿಶತ ಪಾಲನ್ನು ಮಾರಾಟ ಮಾಡಿರುವುದನ್ನು ದೃಢಪಡಿಸಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅ.25ರಂದು ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಿತ್ತು.

ಒಪ್ಪಂದದಡಿಯಲ್ಲಿ ಟಾಟಾ ಸಮೂಹಕ್ಕೆ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಮತ್ತು ಗ್ರೌಂಡ್ ಹ್ಯಾಂಡಿಂಗ್ ಹಾರ್ಮ್ ಏರ್ ಇಂಡಿಯಾ ಎಸ್‍ಎಟಿಎಸ್‍ನಲ್ಲಿ ಶೇ.50ರಷ್ಟು ಪಾಲನ್ನು ನೀಡಲಾಗುವುದು. 2003-04ರ ನಂತರ ಕೇಂದ್ರ ಸರ್ಕಾರ ಮಾಡುತ್ತಿರುವ ಮೊದಲ ಖಾಸಗೀಕರಣ ಇದಾಗಿದೆ. ಏರ್ ಇಂಡಿಯಾ ಟಾಟಾ ಸಮೂಹದ ಮೂರನೆ ಏರ್‍ಲೈನ್ ಬ್ರಾಂಡ್ ಆಗಿದ್ದು, ಈಗಾಗಲೇ ಕಂಪೆನಿಯು ಏರ್ ಏಷ್ಯಾ ಇಂಡಿಯಾ ಮತ್ತು ವಿಸ್ತಾರದಲ್ಲಿ ಪಾಲನ್ನು ಹೊಂದಿದೆ.

Swathi MG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

12 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

29 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

58 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago