Categories: ದೆಹಲಿ

ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ

ನವದೆಹಲಿ : ರಷ್ಯಾ-ಉಕ್ರೇನ್ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಯುತ್ತಿದೆ.

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರುವುದು ಸೇರಿದಂತೆ ಈಗಿನ ಬೆಳವಣಿಗೆಗಳ ಬಗ್ಗೆ ಪ್ರಧಾನಿ ಮೋದಿ ಚರ್ಚೆ ನಡೆಸುತ್ತಿದ್ದಾರೆ.  ಕೇಂದ್ರ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ.

ಉಕ್ರೇನ್‌ನಿಂದ ಭಾರತೀಯರನ್ನು ಮರಳಿಸಲು ಆರಂಭಿಸಿರುವ ‘ಆಪರೇಷನ್ ಗಂಗಾ’ ಅಡಿಯಲ್ಲಿ ನಡೆಯುತ್ತಿರುವ ಪ್ರಯತ್ನಗಳ ಕುರಿತು ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಐದನೇ ಪರಿಶೀಲನಾ ಸಭೆ ಇದಾಗಿದೆ.

18 ಸಾವಿರ ಭಾರತೀಯರು ಇದುವರೆಗೆ ಉಕ್ರೇನ್‌ ತೊರೆದಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿತ್ತು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago