Categories: ದೆಹಲಿ

ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ

  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಸಾರ್ವಜನಿಕರೊಂದಿಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಸಿದ್ಧರಾಗಿದ್ದಾರೆ.

ಬೆಳಗ್ಗೆ 11 ಗಂಟೆಗೆ ಆಕಾಶವಾಣಿಯಲ್ಲಿ ಕಾರ್ಯಕ್ರಮ ಪ್ರಸಾರವಾಗಲಿದೆ.ಇಂದಿನ ‘ಮನ್ ಕಿ ಬಾತ್’ ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ ಮತ್ತು ಗೋವಾ ಚುನಾವಣೆಗಳಲ್ಲಿ ಗೆದ್ದ ನಂತರ ಪ್ರಧಾನಿಯವರ ಮೊದಲ ರೇಡಿಯೋ ಕಾರ್ಯಕ್ರಮವಾಗಿದೆ.

AIR ಮತ್ತು ದೂರದರ್ಶನದ ಸಂಪೂರ್ಣ ನೆಟ್‌ ವರ್ಕ್‌ ನಲ್ಲಿ ಪ್ರಸಾರ ವೀಕ್ಷಿಸಬಹುದು.ಈ ಪ್ಲಾಟ್‌ ಫಾರ್ಮ್‌ ಗಳ ಹೊರತಾಗಿ, ಕಾರ್ಯಕ್ರಮವನ್ನು ಏರ್ ನ್ಯೂಸ್, ಡಿಡಿ ನ್ಯೂಸ್, ಪಿಎಂಒ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಯೂಟ್ಯೂಬ್ ಚಾನೆಲ್‌ಗಳಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.

ವೀಕ್ಷಕರು ರಾತ್ರಿ 8 ಗಂಟೆಗೆ ಪ್ರಧಾನಮಂತ್ರಿಯವರ ‘ಮನ್ ಕಿ ಬಾತ್’ ಭಾಷಣದ ಪ್ರಾದೇಶಿಕ ಭಾಷೆಯ ಆವೃತ್ತಿಗಳನ್ನು ಸಹ ನೋಡಬಹುದು.

‘ಮನ್ ಕಿ ಬಾತ್‌’ನ ಮೊದಲ ಸಂಚಿಕೆಯನ್ನು ಅಕ್ಟೋಬರ್ 3, 2014 ರಂದು ಪ್ರಸಾರ ಮಾಡಲಾಯಿತು. ಇಂದಿನ ‘ಮನ್ ಕಿ ಬಾತ್’ ಪ್ರಸಾರವು ಮಾಸಿಕ ರೇಡಿಯೊ ಕಾರ್ಯಕ್ರಮದ 87 ನೇ ಸಂಚಿಕೆಯಾಗಿದೆ.

“ಮನ್ ಕಿ ಬಾತ್” ಕಾರ್ಯಕ್ರಮವು ಪ್ರಧಾನ ಮಂತ್ರಿಗಳ ಮಾಸಿಕ ರೇಡಿಯೋ ಭಾಷಣವಾಗಿದೆ. ಇದು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗುತ್ತದೆ.

Swathi MG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

26 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

40 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

52 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

1 hour ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

2 hours ago