ಪ್ರಧಾನಿ ನರೇಂದ್ರ ಮೋದಿ ಅವರು ಇಂದು 71 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನಕ್ಕೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು, ಕ್ರೀಡಾಪಟುಗಳು, ಉದ್ಯಮಿಗಳು ಅಷ್ಟೇ ಅಲ್ಲ, ದೇಶದ ಪ್ರತಿಯೊಬ್ಬ ಪ್ರಜೆಯೂ ಶುಭ ಹಾರೈಸಿದ್ದಾರೆ.
ಮೂರು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ಎರಡನೇ ಬಾರಿಗೆ ಭಾರತದ ಪ್ರಧಾನಿ ಸ್ಥಾನ ಅಲಂಕರಿಸಿರುವ ಪ್ರಧಾನಿ ಮೋದಿ ಅವರ ಜನ್ಮದಿನ ಸಂಭ್ರಮಾಚರಣೆಗೆ ಅಭಿಮಾನಿಗಳು ಉತ್ಸುಕರಾಗಿದ್ದಾರೆ. ಪ್ರಧಾನಿ ಮೋದಿಯವರ ಜನ್ಮದಿನವನ್ನು ಬಿಜೆಪಿ ವಿಶಿಷ್ಟವಾಗಿ ಆಚರಿಸುತ್ತಿದೆ. ಕಾಶಿಯಲ್ಲಿರುವ ವಾರಣಾಸಿಯ ಭಾರತ ಮಾತಾ ದೇವಸ್ಥಾನದಲ್ಲಿ 71 ಸಾವಿರ ಮಣ್ಣಿನ ದೀಪಗಳನ್ನು ಬೆಳಗಿಸಲಾಗುತ್ತಿದೆ. ಜೊತೆಗೆ ಬಿಜೆಪಿ 14 ಕೋಟಿ ಪಡಿತರ ಕಿಟ್ಗಳನ್ನು ವಿತರಿಸಲಿದೆ. ರಾಜ್ಯದೆಲ್ಲೆಡೆ ಪ್ರಧಾನಿ ಮೋದಿಯವರ ಜನ್ಮದಿನ ಪ್ರಯುಕ್ತ ಬೃಹತ್ ಸಪ್ತಾಹ, ಲಸಿಕಾ ಮೇಳಗಳನ್ನು ಆಯೋಜಿಸಲಾಗಿದೆ.
20 ದಿನಗಳ ಮೆಗಾ ಅಭಿಯಾನ ‘ಸೇವಾ ಔರ್ ಸಮರ್ಪಣ್ ಅಭಿಯಾನ’ ಇಂದು ಆರಂಭವಾಗಿ ಅ.7ಕ್ಕೆ ಮುಕ್ತಾಯವಾಗಲಿದೆ. ಈ ಬಾರಿ ಪ್ರಧಾನಿಯವರ ಜನ್ಮದಿನಕ್ಕೆ ಬಿಜೆಪಿ ರಕ್ತದಾನ ಶಿಬಿರಿ, ನದಿಗಳ ಸ್ವಚ್ಛತಾ ಅಭಿಯಾನ ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.