News Karnataka Kannada
Sunday, May 12 2024
ದೆಹಲಿ

ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಪ್ರಯತ್ನ ಶ್ಲಾಘನೀಯ: ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಗೆ 75 ವರ್ಷದ ಸಂಭ್ರಮಾಚರಣೆಯ ಮಹೋತ್ಸವದ ಕಾರ್ಯಕ್ರಮವನ್ನು ಇಂದು (ಜ.28) ಪ್ರಧಾನಿ ಮೋದಿ ಉದ್ಘಾಟನೆ ಮಾಡಲಿದ್ದಾರೆ.
Photo Credit : IANS

ನವದೆಹಲಿ : ಯುದ್ಧಪೀಡಿತ ಉಕ್ರೇನ್ ನಿಂದ ಇದುವರೆಗೆ 17 ಸಾವಿರ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯರನ್ನು ದೇಶಕ್ಕೆ ಕರೆಸಿಕೊಳ್ಳಲಾಗಿದೆ ಎಂಬ ಕೇಂದ್ರದ ಪ್ರತಿಪಾದನೆಯನ್ನು ಕೊಂಡಾಡಿರುವ ಸುಪ್ರೀಂ ಕೋರ್ಟ್, ಸರ್ಕಾರದ ಪ್ರಯತ್ನ ಶ್ಲಾಘನೀಯ ಆದರೆ ಜನರ ಆತಂಕ ಕಳವಳವನ್ನುಂಟುಮಾಡುತ್ತಿದೆ ಎಂದು ಹೇಳಿದೆ.

ಉಕ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿರುವ ಭಾರತೀಯ ವಿದ್ಯಾರ್ಥಿಗಳ ಪೋಷಕರಿಗೆ ಮತ್ತು ಕುಟುಂಬಸ್ಥರಿಗೆ ಅನುಕೂಲವಾಗಲು ಆನ್ ಲೈನ್ ಸಹಾಯವಾಣಿಯನ್ನು ಕೇಂದ್ರ ಸರ್ಕಾರ ಸ್ಥಾಪಿಸಲು ಮುಂದಾಗಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದು, ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಕೈಗೆತ್ತಿಕೊಳ್ಳದಂತೆ ಉಚ್ಚ ನ್ಯಾಯಾಲಯಗಳಿಗೆ ಸೂಚಿಸಿದೆ.

ಇಲ್ಲಿಯವರೆಗೆ 17 ಸಾವಿರ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದ್ದು ಉಳಿದವರನ್ನು ಕರೆತರುವ ಕೆಲಸವನ್ನು ಸರ್ಕಾರ ಸಮರೋಪಾದಿಯಲ್ಲಿ ಮಾಡುತ್ತಿದೆ ಎಂದು ಸರ್ಕಾರ ಪರ ಅಟೊರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ನ್ಯಾಯಪೀಠ ಕೈಗೆತ್ತಿಕೊಂಡಿತು.

ಸರ್ಕಾರ ಉಕ್ರೇನ್ ನಲ್ಲಿರುವ ಭಾರತೀಯರನ್ನು ಸ್ಥಳಾಂತರ ಮಾಡಲು ತೆಗೆದುಕೊಂಡಿರುವ ಕ್ರಮ, ಮಾಡುತ್ತಿರುವ ಕೆಲಸವನ್ನು ಒಂದು ಪದದಲ್ಲಿ ಹೇಳಿದರೆ ಸಾಲದು, ಆದರೆ ಇದರ ಜೊತೆಗೆ ಜನರ ಆತಂಕ ಬಗ್ಗೆ ನಮಗೆ ಕಳವಳವಾಗುತ್ತಿದೆ ಎಂದು ನ್ಯಾಯಪೀಠ ಹೇಳಿದೆ.

ಇದರಿಂದಾಚೆಗೆ ರಷ್ಯಾ-ಉಕ್ರೇನ್ ಯುದ್ಧವನ್ನು ದುರದೃಷ್ಟಕರ ಎಂದು ವ್ಯಾಖ್ಯಾನಿಸಿರುವ ಸುಪ್ರೀಂ ಕೋರ್ಟ್, ಸಂಧಾನ-ಮಾತುಕತೆ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ಹೇಳಿದ್ದಾರೆ. ಮಾನವ ಜನಾಂಗವು ಯುದ್ಧಗಳನ್ನು ಮಾಡುತ್ತಾ ಜನರನ್ನು ಕೊಲ್ಲುತ್ತಿರುವ ಇತಿಹಾಸದಿಂದ ನಾವು ಪಾಠಗಳನ್ನು ಕಲಿಯದಿರುವುದು ದುರದೃಷ್ಟಕರ. ಸಂಘರ್ಷಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು. ಈ ವಿಚಾರಗಳಲ್ಲಿ ನಾವು ಮಾತನಾಡುವುದಿಲ್ಲ, ಆದರೆ, ವಿದ್ಯಾರ್ಥಿಗಳನ್ನು ಹೇಗೆ ಉಳಿಸುವುದು ಎಂಬುದೇ ನಮಗೆ ಆತಂಕವಾಗಿದೆ’ ಎಂದು ನ್ಯಾಯಪೀಠ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು