ದೆಹಲಿ

ಉಕ್ರೇನ್-ರಷ್ಯಾ ಯುದ್ಧದಿಂದ ಜಾಗತಿಕ ಮಟ್ಟದ ಸ್ಥಿರತೆಗೆ ಅಪಾಯ : ಪ್ರಧಾನಿ ಮೋದಿ

ನವದೆಹಲಿ; ರಷ್ಯಾ ಹಾಗೂ ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದಿಂದ ಜಾಗತಿಕ ಮಟ್ಟದ ಸ್ಥಿರತೆಗೆ ಅಪಾಯ ಮತ್ತು ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ  ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಯೂರೋಪ್‍ನಲ್ಲಿನ ಇತ್ತೀಚಿನ ಬೆಳವಣಿಗೆಗಳು ಅಂತಾರಾಷ್ಟ್ರೀಯ ಸ್ಥಿರತೆ ಬಗ್ಗೆ ಪ್ರಶ್ನೆಗಳನ್ನು ಏಳುವಂತೆ ಮಾಡಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಭಾರತ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲಿ ತೈಲ ಹಾಗೂ ಆಹಾರ ಬೆಲೆ ಹೆಚ್ಚಾಗುತ್ತಿದ್ದು, ಸಂಕಷ್ಟ ಪರಿಸ್ಥಿತಿ ಎದುರಾಗುತ್ತಿದೆ. ಕೂಡಲೇ ಇದರ ಬಗ್ಗೆ ವಿಶ್ವಸಂಸ್ಥೆ ಗಮನ ಹರಿಸಬೇಕು ಎಂದು ಮನವಿ ಮಾಡಲಾಗಿದೆ.

ಶ್ರೀಲಂಕಾದಲ್ಲಿ ನಡೆಯುತ್ತಿರುವ ಬಿಮ್ಸ್ಟೆಕ್ ಶೃಂಗಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಮೋದಿ ಪ್ರಾದೇಶಿಕ ಸಹಕಾರ, ದಕ್ಷಿಣ ಮತ್ತು ಆಗ್ನೇಯ ಏಷ್ಯಾ ದೇಶಗಳಲ್ಲಿ ಆದ್ಯತೆಯಾಗಿದೆ.

ನಮ್ಮ ಪ್ರದೇಶಗಳು ಆರೋಗ್ಯ ಮತ್ತು ಆರ್ಥಿಕ ಭದ್ರತೆಯ ಸವಾಲುಗಳನ್ನು ಎದುರಿಸುತ್ತಿದೆ. ನಾವೆಲ್ಲರೂ ಏಕತೆ ಮತ್ತು ಸಹಕಾರದಿಂದ ಮುನ್ನಡೆಯುವ ಅಗತ್ಯವಿದೆ ಎಂದು ಹೇಳಿದರು.

ಶ್ರೀಲಂಕಾದಲ್ಲಿ ಎದ್ದಿರುವ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಭಾರತವು ಮಾನವೀಯತೆ ಕಾಳಜಿಯೊಂದಿಗೆ ಒಂದು ಮಿಲಿಯನ್ ಡಾಲರ್ ನೆರವು ಒದಗಿಸುತ್ತಿದೆ ಎಂದು ಹೇಳಿದರು.

ಬಿಮ್ಸ್ಟೆಕ್ ದೇಶಗಳೊಂದಿಗೆ ಪರಸ್ಪರ ವ್ಯಾಪಾರ ಹೆಚ್ಚಿಸಲು ಮುಕ್ತ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಳ್ಳಲು ಒತ್ತು ನೀಡಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು. ಹೊಸ ಉತ್ಸಾಹದಲ್ಲಿ ಕೆಲಸ ಮಾಡಿ ನಾವುಗಳು ಯಶಸ್ಸು ಸಾಸಿ ನಿರ್ದಿಷ್ಟ ಗುರಿ ಸಾಸೋಣ ಎಂದು ಪ್ರಧಾನಿ ಹೇಳಿದ್ದಾರೆ.

 

 

Swathi MG

Recent Posts

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

17 mins ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

1 hour ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

2 hours ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

3 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

3 hours ago