ದೆಹಲಿ: ಮೂರು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಐದು ನಾಗರಿಕರ ಹತ್ಯೆ ಖಂಡಿಸಿದ ರಾಹುಲ್ ಗಾಂಧಿ “ಕಾಶ್ಮೀರದಲ್ಲಿ ಹಿಂಸಾಚಾರದ ಘಟನೆಗಳು ಹೆಚ್ಚುತ್ತಿವೆ. ನೋಟು ರದ್ದತಿಯಿಂದ ಅಥವಾ 370 ನೇ ವಿಧಿಯನ್ನು ತೆಗೆದುಹಾಕುವ ಮೂಲಕ ಭಯೋತ್ಪಾದನೆಯನ್ನು ನಿಲ್ಲಿಸಲಾಗಿಲ್ಲ.
ಕೇಂದ್ರ ಸರ್ಕಾರ ಭದ್ರತೆ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ನಮ್ಮ ಕಾಶ್ಮೀರಿ ಸಹೋದರ ಸಹೋದರಿಯರ ಮೇಲಿನ ದಾಳಿಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಮತ್ತು ಮೃತರ ಕುಟುಂಬಗಳಿಗೆ ನಮ್ಮ ಸಂತಾಪ ಸೂಚಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.