ದೆಹಲಿ

ಎರಡೂ ಡೋಸ್ ಲಸಿಕೆ ಪಡೆದಿದ್ದ ವ್ಯಕ್ತಿಗೆ ಓಮೈಕ್ರಾನ್

ನವದೆಹಲಿ: ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ಪ್ರಯಾಣದ ಹಿನ್ನೆಲೆ ಹೊಂದಿರುವ 35 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಿಗೆ ದೆಹಲಿಯಲ್ಲಿ ಕೊರೊನಾ ವೈರಸ್‌ನ ರೂಪಾಂತರ ತಳಿ ಓಮೈಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ.ಸೋಂಕಿತ ವ್ಯಕ್ತಿಯನ್ನು ಲೋಕನಾಯಕ ಜಯಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಬಳಲಿಕೆ ಕಾಣಿಸಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.

ಇದರೊಂದಿಗೆ, ದೆಹಲಿಯಲ್ಲಿ ಎರಡನೇ ಓಮೈಕ್ರಾನ್ ಪ್ರಕರಣ ಪತ್ತೆಯಾದಂತಾಗಿದೆ.

ಅವರು ಜಿಂಬಾಬ್ವೆಯಿಂದ ಭಾರತಕ್ಕೆ ಬಂದಿದ್ದರು. ಅದಕ್ಕೂ ಮುನ್ನ ದಕ್ಷಿಣ ಆಫ್ರಿಕಾಕ್ಕೂ ಪ್ರಯಾಣಿಸಿದ್ದರು. ಎರಡೂ ಡೋಸ್ ಲಸಿಕೆ ಪಡೆದಿದ್ದರು ಎಂದು ಮೂಲಗಳು ಹೇಳಿವೆ.ಸದ್ಯ ದೆಹಲಿಯಲ್ಲಿ ಓಮೈಕ್ರಾನ್‌ ಸೋಂಕಿತರಿಗೆ ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಭಾನುವಾರ ದೆಹಲಿಯಲ್ಲಿ 37 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರಲ್ಲಿ ಓಮೈಕ್ರಾನ್ ದೃಢಪಟ್ಟಿತ್ತು. ತಾಂಜಾನಿಯಾದಿಂದ ಬಂದ ಅವರು ಎರಡೂ ಡೋಸ್ ಲಸಿಕೆ ಪಡೆದಿದ್ದರು. ಇದು ದೆಹಲಿಯಲ್ಲಿ ಪತ್ತೆಯಾದ ಮೊದಲ ಓಮೈಕ್ರಾನ್ ಪ್ರಕರಣವಾಗಿತ್ತು.

ರಾಂಚಿಯ ನಿವಾಸಿಯಾಗಿರುವ ಅವರು ತಾಂಜಾನಿಯಾದಿಂದ ದೋಹಾಗೆ ಪ್ರಯಾಣಿಸಿ ಅಲ್ಲಿಂದ ಕತಾರ್ ಏರ್‌ವೇಸ್ ವಿಮಾನದಲ್ಲಿ ಡಿಸೆಂಬರ್ 2ರಂದು ದೆಹಲಿಗೆ ಬಂದಿದ್ದರು. ಇವರು ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಲ್ಲಿ ಒಂದು ವಾರ ತಂಗಿದ್ದರು.

ದೇಶದಲ್ಲಿ ಓಮೈಕ್ರಾನ್ ಸೋಂಕಿನ 25 ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ತಿಳಿಸಿತ್ತು. ಇದುವರೆಗೆ ಓಮೈಕ್ರಾನ್ ಸೋಂಕಿಗೆ ಒಳಗಾದವರಲ್ಲಿ ಸೌಮ್ಯ ಲಕ್ಷಣಗಳು ಕಂಡುಬಂದಿವೆ ಎಂದೂ ಸರ್ಕಾರ ತಿಳಿಸಿತ್ತು. ಮಹಾರಾಷ್ಟ್ರದಲ್ಲಿ ಮೂರೂವರೆ ವರ್ಷದ ಮಗು ಸೇರಿ ಒಟ್ಟು ಏಳು ಜನರಿಗೆ ಶುಕ್ರವಾರ ಓಮೈಕ್ರಾನ್‌ ಸೋಂಕು ದೃಢಪಟ್ಟಿತ್ತು.

Swathi MG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

8 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

9 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

9 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

10 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

10 hours ago