News Karnataka Kannada
Friday, May 17 2024
ದೆಹಲಿ

ಐದು ರಾಜ್ಯಗಳಲ್ಲಿ ಕೋವಿಡ್ ಹೆಚ್ಚಳ:ಮುಂಜಾಗ್ರತೆ ವಹಿಸುವಂತೆ ಕೇಂದ್ರದ ಎಚ್ಚರಿಕೆ

Photo Credit :

ನವದೆಹಲಿ:  ಕೇಂದ್ರ ಸರ್ಕಾರ ಐದು ರಾಜ್ಯಗಳಿಗೆ ಕೋವಿಡ್ ಹೆಚ್ಚಳವಾಗುತ್ತಿರುವ ಬಗ್ಗೆ ಎಚ್ಚರಿಸಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

ಭಾರತದಲ್ಲಿನ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ಚಟುವಟಿಕೆಗಳ ಪುನರಾರಂಭಕ್ಕೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ವಿವಿಧ ರೀತಿಯ ಕ್ರಮಗಳನ್ನು ತೆಗೆದುಕೊಂಡಿತ್ತು. ಈ ನಿಟ್ಟಿನಲ್ಲಿ ಕೋವಿಡ್ 19 ಸೋಂಕು ನಿರ್ವಹಣೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಭೂಷಣ್ ಪತ್ರದಲ್ಲಿ ತಿಳಿಸಿರುವುದಾಗಿ ವರದಿ ಹೇಳಿದೆ.

ಕೇರಳ, ಮಿಜೋರಾಂ, ಮಹಾರಾಷ್ಟ್ರ, ದೆಹಲಿ ಮತ್ತು ಹರ್ಯಾಣ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪತ್ರ ಬರೆದಿದೆ.

ಕಳೆದ ವಾರ ಕೇರಳದಲ್ಲಿ 2,321 ಕೋವಿಡ್ ಪ್ರಕರಣ ವರದಿಯಾಗಿತ್ತು. ದೇಶದ ಕೋವಿಡ್ ಪ್ರಕರಣಗಳಲ್ಲಿನ ಶೇ.31.08ರಷ್ಟು ಸೋಂಕು ಕೇರಳದಲ್ಲಿ ಪತ್ತೆಯಾಗಿದೆ. ವಾರದ ಪಾಸಿಟಿವಿಟಿ ದರ ಕೂಡಾ ಶೇ.13.45ರಿಂದ ಶೇ.15.53ಕ್ಕೆ ಏರಿಕೆಯಾಗಿದೆ.

ದೆಹಲಿಯಲ್ಲಿಯೂ ಕಳೆದ ವಾರದಲ್ಲಿ 826 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ವಾರದ ಪಾಸಿಟಿವಿಟಿ ದರ ಕೂಡಾ ಶೇ.0.51ರಿಂದ ಶೇ.1.25ಕ್ಕೆ ಹೆಚ್ಚಳವಾಗಿದೆ. ಹರ್ಯಾಣದಲ್ಲಿ 416 ಕೋವಿಡ್ ಪ್ರಕರಣ ವರದಿಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.1.06ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ 794 ಕೋವಿಡ್ ಪ್ರಕರಣಗಳು ವರದಿಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.0.43ಕ್ಕೆ ಏರಿಕೆಯಾಗಿದೆ. ಮಿಜೋರಾಂನಲ್ಲಿ 814 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.16.48ಕ್ಕೆ ಏರಿಕೆಯಾಗಿದೆ ಎಂದು ಪತ್ರದಲ್ಲಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು