ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಶೇ.35ರಷ್ಟು ಒಮಿಕ್ರಾನ್ ಪ್ರಕರಣಗಳು ಹೆಚ್ಚಾಗಿದೆ.ಅತ್ಯಂತ ವೇಗವಾಗಿ ಹರಡುತ್ತದೆ ಎಂದು ಹೇಳಲಾಗುವ ಒಮಿಕ್ರಾನ್ ಸೋಂಕು ಕಳೆದ 275 ದಿನಗಳಲ್ಲೇ ಅತೀ ಹೆಚ್ಚು 481 ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1431ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 454 ಪ್ರಕರಣಗಳು ದೃಢಪಟ್ಟರೆ, ದೆಹಲಿಯಲ್ಲಿ 351ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 66ಕ್ಕೆ ಜಿಗಿತ ಕಂಡಿದೆ. ನೆರೆಯ ತಮಿಳುನಾಡಿನಲ್ಲಿ ಅತೀ ಹೆಚ್ಚು ಸೋಂಕು ಕಾಣಿಸಿಕೊಂಡಿದ್ದು, 118ಕ್ಕೆ ಸೋಂಕಿತರು ಹೆಚ್ಚಾಗಿದ್ದಾರೆ.