Categories: ದೆಹಲಿ

ಒಮೈಕ್ರಾನ್ ಭೀತಿ ನಡುವೆಯೂ ಭಾರತದಲ್ಲಿ ಕೋವಿಡ್ ಸೋಂಕು ಇಳಿಕೆ

ಹೊಸದಿಲ್ಲಿ: ದೇಶದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ ಒಮೈಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದರೂ, ಭಾರತದಲ್ಲಿ ಒಟ್ಟು ಕೋವಿಡ್-19 ಸೋಂಕು ಇಳಿಮುಖವಾಗುತ್ತಿದೆ. ದೇಶದಲ್ಲಿ 19 ತಿಂಗಳಲ್ಲೇ ಮೊದಲ ಬಾರಿಗೆ ಒಂದು ವಾರದ ಅವಧಿಯಲ್ಲಿ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕೆಳಗಿಳಿದಿದೆ.ಒಂದು ವಾರದ ಅವಧಿಯಲ್ಲಿ ಸಾವಿನ ಸಂಖ್ಯೆ ಕೂಡಾ 2 ಸಾವಿರಕ್ಕಿಂತ ಕೆಳಗೆ ಇಳಿದಿದೆ.

ಡಿಸೆಂಬರ್ 13 ರಿಂದ 19ರವರೆಗೆ ದೇಶದಲ್ಲಿ 49 ಸಾವಿರ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಇದು ಹಿಂದಿನ ವಾರ ಇದ್ದ 55,824 ಪ್ರಕರಣಗಳಿಗೆ ಹೋಲಿಸಿದರೆ ಶೇಕಡ 12.3ರಷ್ಟು ಕಡಿಮೆ. 2020ರ ಮೇ ತಿಂಗಳಲ್ಲಿ ದೇಶದಲ್ಲಿ ಸಾಂಕ್ರಾಮಿಕ ವ್ಯಾಪಕವಾದ ಬಳಿಕ ಒಂದು ವಾರದ ಅವಧಿಯಲ್ಲಿ 50 ಸಾವಿರಕ್ಕಿಂತ ಕಡಿಮೆ ಪ್ರಕರಣ ವರದಿಯಾಗಿರುವುದು ಇದೇ ಮೊದಲು. 2020ರ ಮೇ 25-31ರ ಅವಧಿಯಲ್ಲಿ 48,858 ಪ್ರಕರಣ ವರದಿಯಾಗಿತ್ತು.

ದೇಶದಲ್ಲಿ ಡಿಸೆಂಬರ್ 13-19ರ ಅವಧಿಯಲ್ಲಿ 1922 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಪೈಕಿ 680 ಸಾವಿನ ಪ್ರಕರಣಗಳು ಇತ್ತೀಚೆಗೆ ಸಂಭವಿಸಿದವು. ಉಳಿದ 1242 ಪ್ರಕರಣಗಳ ಪೈಕಿ ಬಹುತೇಕ ಸಾವು ಕೇರಳದಿಂದ ವರದಿಯಾಗಿದೆ.

ಕೇರಳದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ ಹಿಂದಿನ ವಾರಕ್ಕೆ ಹೋಲಿಸಿದರೆ ಶೇಕಡ 20ರಷ್ಟು ಇಳಿಕೆಯಾಗಿದೆ. ಕಳೆದ ವಾರ 28,684 ಪ್ರಕರಣಗಳು ವರದಿಯಾಗಿದ್ದ ಕೇರಳದಲ್ಲಿ ಈ ಬಾರಿ 22984 ಪ್ರಕರಣಗಳು ಬೆಳಕಿಗೆ ಬಂದಿವೆ. ಹಲವು ವಾರಗಳಲ್ಲಿ ಮೊದಲ ಬಾರಿಗೆ ದೇಶದ ಒಟ್ಟು ಪ್ರಕರಣಗಳ ಪೈಕಿ ಕೇರಳದ ಪ್ರಕರಣಗಳು ಶೇಕಡ 50ಕ್ಕಿಂತ ಕಡಿಮೆ ಇವೆ. ಈ ವಾರ ಕೇರಳದ ಪಾಲು ಶೇಕಡ 47ರಷ್ಟಾಗಿದೆ. ಬಹುತೇಕ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಮಹಾರಾಷ್ಟ್ರ ಹಾಗೂ ದೆಹಲಿಯಲ್ಲಿ ಸತತ ಎರಡನೇ ವಾರ ಪ್ರಕರಣಗಳು ಹೆಚ್ಚಿವೆ.

Swathi MG

Recent Posts

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

4 mins ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

16 mins ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

39 mins ago

ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಆರ್.ಪ್ರಜ್ಞಾನಂದಗೆ ಮತ್ತೊಂದು ಗೆಲುವು

ಸೂಪರ್‌ಬಿಟ್‌ ರ್‍ಯಾಪಿಡ್ ಮತ್ತು ಬ್ಲಿಟ್ಜ್‌ ಚೆಸ್‌ ಟೂರ್ನಿಯಲ್ಲಿ ವಿಶ್ವದ ಅಗ್ರಮಾನ್ಯ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸನ್‌ ವಿರುದ್ಧ ಭಾರತದ ಗ್ರ್ಯಾಂಡ್…

56 mins ago

ನಟ ಚೇತನ್​ ಚಂದ್ರ ಮೇಲೆ 20 ಜನರಿಂದ ಹಲ್ಲೆ : ದೂರು ದಾಖಲು

ಕನ್ನಡ ಸಿನಿಮಾ ಹಾಗೂ ಕಿರುತೆರೆಯ ಯುವ ನಟ ಚೇತನ್ ಚಂದ್ರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ ನಡೆದಿದೆ. ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ…

1 hour ago

ಪೆನ್​ಡ್ರೈವ್ ಹಂಚಿಕೆ ಪ್ರಕರಣ : ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14…

1 hour ago