Categories: ದೆಹಲಿ

‘ಓಮಿಕ್ರಾನ್’ಆತಂಕ; ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರದಿಂದ ಆದೇಶ

ನವದೆಹಲಿ: ವಿಶ್ವದೆಲ್ಲೆಡೆ ಕೊರೋನಾ ರೂಪಾಂತರಿ ‘ಓಮಿಕ್ರೋನ್’ ಆತಂಕ ಮೂಡಿಸಿದ್ದು, ದೇಶದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರಸರ್ಕಾರದಿಂದ ಮಹತ್ವದ ಸೂಚನೆ ನೀಡಲಾಗಿದೆ. ಸೋಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ತೀವ್ರ ನಿಗಾ ವಹಿಸಬೇಕು. ಲಸಿಕೆ ಅಭಿಯಾನವನ್ನು ಇನ್ನೂ ತ್ವರಿತಗೊಳಿಸಬೇಕು ಎಂದು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಸೂಚನೆ ನೀಡಲಾಗಿದೆ.

ಎಲ್ಲಾ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಈ ಬಗ್ಗೆ ಸೂಚನೆ ನೀಡಿದ್ದರು. ಪ್ರಧಾನಿ ಮೋದಿ ನೀಡಿದ ಸೂಚನೆ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನಿನ್ನೆ ಮೋದಿಯವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ ನೀಡಿದ್ದರು.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago