Categories: ದೆಹಲಿ

ಓಮಿಕ್ರಾನ ಬಗ್ಗೆ ಭಯಗೊಳ್ಳುವ ಅಗತ್ಯವಿಲ್ಲ: ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ

ಕೊರೋನಾ ಎಂದರೆ ಸಾಕು ಬಹುತೇಕ ನಿದ್ರೆ ಮಾಡುತ್ತಿರುವ ಮಂದಿ ಕೂಡ ಗಾಬರಿಗೊಂಡು ಎಚ್ಚರವಾಗಿ ಕುಳಿತು ಬಿಡುತ್ತಾರೆ. ಅಷ್ಟರ ಮಟ್ಟಿಗೆ ಕಳೆದ ಎರಡು ವರ್ಷಗಳು ಇದರಿಂದ ನಾವು ತೊಂದರೆಯನ್ನು ಅನುಭವಿಸಿದ್ದೇವೆ. ಇದೀಗ ಸ್ವಲ್ಪ ಮಟ್ಟಿಗೆ ಚೇತರಿಸಿಕೊಂಡಿದ್ದೇವೆ ಎನ್ನುವಷ್ಟರಲ್ಲಿ ಕೋವಿಡ್‌ ಹೊಸ ರೂಪಾಂತರಿ  ಓಮಿಕ್ರಾನ್ ಪತ್ತೆಯಾಗಿದೆ. ಮತ್ತೆ ಎಲ್ಲರಲ್ಲೂ ಭಯದ ವಾತಾವರಣ ಸೃಷ್ಟಿಯಾಗಿದೆ.

ಆದರೆ ಓಮಿಕ್ರಾನ ಬಗ್ಗೆ ಭಯ ಭೀತಿಗೊಳಗಾಗಲು ಯಾವುದೇ ಕಾರಣಗಳಿಲ್ಲ ಎಂದು  ರಷ್ಯಾ ದಲ್ಲಿರುವ ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಮೆಲಿಟಾ ವುಜ್ನೋವಿಕ್ ಹೇಳಿದ್ದಾರೆ.

ಕೋವಿಡ್‌ ರೂಪಾಂತರಿ ಓಮಿಕ್ರಾನ ಬಗ್ಗೆ  ಭಯ-ಭೀತಿಗೆ ಒಳಗಾಗುವ ಅಗತ್ಯವಿದೆ ಎಂದು ನನಗೆ ಅನಿಸುತ್ತಿಲ್ಲ. ಏಕೆಂದರೆ ಲಸಿಕೆಯು ಹೊಸ ತಳಿಯ ವಿರುದ್ಧ ಯಾವ ಸಾಮರ್ಥ್ಯದಲ್ಲಿ ಹೋರಾಡುತ್ತದೆ ಎಂಬುದು ಇನ್ನು ತಿಳಿದಿಲ್ಲ. ಈ ವೈರಸ್ ಮತ್ತು ಲಸಿಕೆಯನ್ನು ಬೈಪಾಸ್ ಮಾಡಿದರೆ ಲಸಿಕೆಯ ಪರಿಣಾಮಕಾರಿತ್ವವನ್ನುಅರಿತುಕೊಳ್ಳಬಹುದು ಎಂದು ಮೆಲಿಟಾ ಹೇಳಿದ್ದಾರೆ.

ಓಮಿಕ್ರಾನ್ ಈ ಮೊದಲು ಬಂದಿರುವ ಎಲ್ಲ ರೂಪಾಂತರಿಗಿಂತ ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿರಬಹುದು ಎಂದು  ವುಜ್ನೋವಿಕ್ ಕೂಡ ಅಂದಾಜಿಸಿದ್ದಾರೆ.

ದಕ್ಷಿಣ ಆಫ್ರಿಕಾ ಕೊರೋನಾ ಲಸಿಕೆಯನ್ನು ಉತ್ಪಾದಿಸುತ್ತಿದ್ದರು ಸಹ, ಆಫ್ರಿಕಾ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಡೋಸ್‌ ಶೇಖರಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Sneha Gowda

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago