Categories: ದೆಹಲಿ

ಕಂಗನಾ ರಣಾವತ್ ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಿರಿ: ನವಾಬ್ ಮಲ್ಲಿಕ್ ಒತ್ತಾಯ

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆದು ಆಕೆಯನ್ನು ಬಂಧಿಸಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಹೇಳಿಕೆ ನೀಡುವ ಮುನ್ನ ಬಾಲಿವುಡ್ ನಟಿ ಭಾರೀ ಡ್ರಗ್ಸ್ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ. ಕಂಗನಾ ರಣಾವತ್ ಹೇಳಿಕೆಯನ್ನು ಖಂಡಿಸಿರುವ ನವಾಬ್ ಮಲ್ಲಿಕ್, ‘2014ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ’ ಎಂಬ ಕಂಗನಾ ರಣಾವತ್ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಟಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕೇಂದ್ರ ಕಂಗನಾ ಅವರಿಂದ ಪದ್ಮಶ್ರೀಯನ್ನು ವಾಪಸ್ ಪಡೆದು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸದಾ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುವ ನಟಿ ಕಂಗನಾ ರಣಾವತ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಪರೋಕ್ಷವಾಗಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದರು.

ಕಂಗನಾರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು, ಇದಕ್ಕೂ ಮುನ್ನ ವರುಣ್ ಗಾಂಧಿಯಿಂದ ಹಿಡಿದು ಅನೇಕ ನಾಯಕರು ಕಂಗನಾ ರಣಾವತ್ ಅವರನ್ನು ಟೀಕಿಸಿದ್ದಾರೆ .

Sneha Gowda

Recent Posts

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

10 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

24 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

40 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

43 mins ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

1 hour ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

1 hour ago