News Karnataka Kannada
Sunday, May 05 2024
ದೆಹಲಿ

ಕಲ್ಯಾಣ ಕರ್ನಾಟಕಕ್ಕೆ ₹ 5030 ಕೋಟಿ ಅನುದಾನಕ್ಕೆ ಮನವಿ

ಸಿಎಂ ಬಸವರಾಜ ಬೊಮ್ಮಾಯಿ
Photo Credit :

ಹೊಸದಿಲ್ಲಿ: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ ₹ 5030 ಕೋಟಿ ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.

ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರ ಪ್ರದೇಶ ರಾಜ್ಯವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು. ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ.

371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ ನೀಡುವ ಅಗತ್ಯವಿದೆ.

ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಈ ಜಿಲ್ಲೆಗಳು ಹಿಂದುಳಿದಿರುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ ₹ 5030 ಕೋಟಿ ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು