News Karnataka Kannada
Tuesday, May 07 2024
ದೆಹಲಿ

ಕಳೆದ 24 ಗಂಟೆಯಲ್ಲಿ 9,419 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ

coivd 19
Photo Credit :

ನವದೆಹಲಿ:  ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 474111 ಕ್ಕೆ ಏರಿಕೆಯಾಗಿದೆ. ಒಮಿಕ್ರಾನ್ ಭೀತಿ ನಡುವೆಯೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 9,419 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 159 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಇನ್ನು ದೇಶದಲ್ಲಿ 94742 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8251 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34097388 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 12,89,983 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 80,86,910 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,30,39,32,286 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು