ದೆಹಲಿ

ಕಳೆದ 24 ತಾಸುಗಳ ಅವಧಿಯಲ್ಲಿ 16,326 ಕೊರೋನಾ ಪ್ರಕರಣಗಳು ದೃಢ

ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 16,326 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 666 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,41,59,562ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 453708ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,73,728ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 17,677 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,35,32,126ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 13,64,681 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 59,84,31,162 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,01,30,28,411 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

3 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

26 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

42 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago