ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಇಬ್ಬರು ಮಕ್ಕಳ ಇನ್ಸ್ಟಾಗ್ರಾಂ ಖಾತೆ ಹ್ಯಾಕ್ ಆಗಿದೆ ಎಂದು ನಿನ್ನೆ ಆರೋಪ ಮಾಡಿದ್ದರು. ಸರ್ಕಾರವು ತನ್ನ ಮಕ್ಕಳ ಇನ್ಸ್ಟಾಗ್ರಾಂ ಖಾತೆಗಳನ್ನು ಹ್ಯಾಕ್ ಮಾಡಿದೆ ಎಂಬ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆರೋಪವನ್ನು ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಗಂಭೀರವಾಗಿ ಪರಿಗಣಿಸಿದ್ದು, ಈ ಆರೋಪದ ಕುರಿತು ತನಿಖೆಗೆ ಆದೇಶಿಸಿದೆ.
ಮಂಗಳವಾರ ಪ್ರಿಯಾಂಕಾ ಗಾಂಧಿ ಅವರು ತಮ್ಮ ಮಕ್ಕಳ ಇನ್ಸ್ಟಾಗ್ರಾಂ ಖಾತೆಗಳನ್ನು ಸರ್ಕಾರ ಹ್ಯಾಕ್ ಮಾಡಿದೆ ಎಂದು ಆರೋಪಿಸಿದ್ದರು. ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮಾಡಿರುವ ಫೋನ್ ಕದ್ದಾಲಿಕೆ ಆರೋಪಗಳನ್ನು ಅವರು ಉಲ್ಲೇಖಿಸಿದ್ದರು. ಅವರು ಫೋನ್ ಟ್ಯಾಪಿಂಗ್ ಮಾಡುವುದು ಮಾತ್ರವಲ್ಲದೆ ನನ್ನ ಮಕ್ಕಳ ಇನ್ಸ್ಟಾಗ್ರಾಂ ಖಾತೆಗಳನ್ನು ಸಹ ಹ್ಯಾಕ್ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸವಿಲ್ಲವೇ ಎಂದು ಪ್ರಿಯಾಂಕಾ ಪ್ರಶ್ನಿಸಿದ್ದರು.