News Karnataka Kannada
Monday, April 29 2024
ದೆಹಲಿ

ಕಾರಿನಲ್ಲಿ ಒಬ್ಬರೇ ಪ್ರಯಾಣಿಸುವಾಗ ಮಾಸ್ಕ್‌ ಕಡ್ಡಾಯ, ಅಸಂಬದ್ಧ: ದೆಹಲಿ ಹೈಕೋರ್ಟ್

Accused acquitted in case of obstructing police department from discharging its duties
Photo Credit : IANS

ನವದೆಹಲಿ, ಫೆ.2 : ಕಾರುಗಳಲ್ಲಿ ಒಬ್ಬರೇ ಪ್ರಯಾಣಿಸುವವರೂ ಸಹ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಬೇಕು ಎನ್ನುವ ದೆಹಲಿ ಸರ್ಕಾರದ ಆದೇಶವನ್ನು ‘ಅಸಂಬದ್ಧ’ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಈ ನಿಯಮವನ್ನು ಈಗಲೂ ಏಕೆ ಮುಂದುವರಿಸಲಾಗುತ್ತಿದೆ ಎಂದು ದೆಹಲಿ ಸರ್ಕಾರವನ್ನು ಪ್ರಶ್ನಿಸಿದೆ.

ನ್ಯಾಯಮೂರ್ತಿಗಳಾದ ವಿಪಿನ್‌ ಸಾಂಘಿ ಮತ್ತು ಜಸ್ಮೀತ್‌ ಸಿಂಗ್‌ ಅವರಿದ್ದ ವಿಭಾಗೀಯ ಪೀಠವು ಕೋವಿಡ್‌ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಪ್ರಸ್ತಾಪ ಮಾಡಿದ್ದ ಪ್ರಕರಣದ ವಿಚಾರಣೆಯನ್ನು ನಡೆಸಿ, ಈ ರೀತಿ ಅಭಿಪ್ರಾಯಪಟ್ಟಿದೆ.

ವಿಚಾರಣೆಯ ಒಂದು ಹಂತದಲ್ಲಿ, ದೆಹಲಿ ಸರ್ಕಾರವನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ರಾಹುಲ್‌ ಮೆಹ್ರಾ ಅವರು “ಕಾರುಗಳಲ್ಲಿ ಮಾಸ್ಕ್‌ಗಳನ್ನು ಧರಿಸುವುದರ ವಿರುದ್ಧ ನಾವು ನ್ಯಾಯಾಲಯದಿಂದ ಆದೇಶವನ್ನು ಪಡೆಯಬಹುದೇ?,” ಎಂದು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯವು, ಕಾರುಗಳಲ್ಲಿ ಮಾಸ್ಕ್‌ ಧರಿಸುವ ಆದೇಶವನ್ನು ಹೊರಡಿಸಿರುವುದು ದೆಹಲಿ ಸರ್ಕಾರ. ಹಾಗಾಗಿ, ತಾನು ಅದನ್ನು ಹಿಂಪಡೆಯಲು ಅಗದು ಎಂದು ನೆನಪಿಸಿತು. ಇದೇ ವೇಳೆ, ಈ ಬಗ್ಗೆ ಸೂಕ್ತ ನಿರ್ದೇಶನವನ್ನು ದೆಹಲಿ ಸರ್ಕಾರದಿಂದ ಪಡೆಯುವಂತೆ ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು