Categories: ದೆಹಲಿ

ಕೇಂದ್ರದಿಂದ ಕೊವ್ಯಾಕ್ಸಿನ್ ಲಸಿಕೆ ರಫ್ತಿಗೆ ಗ್ರೀನ್ ಸಿಗ್ನಲ್

ನವದೆಹಲಿ: ಕೊವ್ಯಾಕ್ಸಿನ್ ಲಸಿಕೆಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಲಾಗಿದೆ. ಭಾರತ್ ಬಯೋಟೆಕ್‌ನ ಕೋವಿಡ್-19 ಲಸಿಕೆ ಕೋವಾಕ್ಸಿನ್‌ನ ವಾಣಿಜ್ಯ ರಫ್ತಿಗೆ ಸರ್ಕಾರ ಹಸಿರು ನಿಶಾನೆ ತೋರಿದ್ದು, ಹೈದರಾಬಾದ್ ನ ಭಾರತ್ ಬಯೋಟೆಕ್ ಕಂಪನಿಯ ಕೊವ್ಯಾಕ್ಸಿನ್ ಲಸಿಕೆಯನ್ನು ವಾಣಿಜ್ಯ ಉದ್ದೇಶಕ್ಕೆ ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೋವಿಡ್ -19 ಗಾಗಿ ಭಾರತದ ಮೊದಲ ಸ್ಥಳೀಯ ಲಸಿಕೆಯಾದ ಕೋವಾಕ್ಸಿನ್ ಮಾರಣಾಂತಿಕ ಸಾಂಕ್ರಾಮಿಕ ವೈರಸ್ ವಿರುದ್ಧ ಶೇಕಡ 77.8 ರಷ್ಟು ಪರಿಣಾಮಕಾರಿಯಾಗಿದೆ ಎಂದು ಇತ್ತೀಚೆಗೆ ದಿ ಲ್ಯಾನ್ಸೆಟ್‌ನಲ್ಲಿ ಪ್ರಕಟವಾದ ವರದಿ ತಿಳಿಸಿದೆ.

 ಕೇಂದ್ರದ ಒಪ್ಪಿಗೆಯೊಂದಿಗೆ ಭಾರತದ ಸ್ಥಳೀಯ ಲಸಿಕೆ ಕೋವಾಕ್ಸಿನ್ ಖರೀದಿಸಲು ಬಯಸುವ ದೇಶಗಳಿಗೆ ಶೀಘ್ರದಲ್ಲೇ ಕಳುಹಿಸಲಾಗುವುದು.

ನವೆಂಬರ್ 3, 2021 ರಂದು, ವಿಶ್ವ ಆರೋಗ್ಯ ಸಂಸ್ಥೆ ಕೋವಾಕ್ಸಿನ್‌ ಗೆ ಬಹುನಿರೀಕ್ಷಿತ ತುರ್ತು ಬಳಕೆಯ ಅನುಮತಿ ನೀಡಿದೆ. ಯುಕೆ ಸರ್ಕಾರ ಕೋವಾಕ್ಸಿನ್ ಲಸಿಕೆ ಪಡೆದ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ನವೆಂಬರ್ 22, 2021 ರಿಂದ ಪ್ರವೇಶಕ್ಕೆ ಅವಕಾಶ ನೀಡಿದ್ದು, ಅನುಮೋದಿತ ಕೋವಿಡ್ ಲಸಿಕೆಗಳ ಪಟ್ಟಿಗೆ ಕೊವ್ಯಾಕ್ಸಿನ್ ಸೇರಿಸಿದೆ.

ಭಾರತ್ ಬಯೋಟೆಕ್ ಕೋವಾಕ್ಸಿನ್ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ  ಮತ್ತು ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ  ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿದೆ.

Swathi MG

Recent Posts

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

2 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

29 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

42 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

57 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago