ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ಮುಂದೆ ಎರಡು ಬೇಡಿಕೆಗಳನ್ನಿಟ್ಟಿದ್ದಾರೆ. ಕೊರೊನಾ ಸೋಂಕಿನ ಕುರಿತಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಮಾಹಿತಿಯ ಬಗ್ಗೆ ಶಂಕಿಸಿ ರಾಹುಲ್ ಟ್ವೀಟ್ ಮಾಡಿದ್ದಾರೆ.
ಟ್ವೀಟ್ 1 : ಕೊರೊನಾ ಸೋಂಕಿನಿಂದ ಮೃತಪಟ್ಟವರ ನಿಖರವಾದ ಅಂಕಿ-ಸಂಖ್ಯೆಯನ್ನು ತಿಳಿಸಬೇಕು.
ಟ್ವೀಟ್ 2 : ಕೊರೊನಾದಿಂದ ಮೃತರಾದವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡಬೇಕು. ಸರ್ಕಾರ ರಚಿಸಿದರೆ ಸಾಕಾಗಲ್ಲ, ಸಂಕಷ್ಟದಲ್ಲಿರುವ ಜನರಿಗೆ ಪರಿಹಾರ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳುವ ಮೂಲಕ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ.