ನವದೆಹಲಿ: ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (64) ಅವರಿಗೆ ಮತ್ತೆ ಕೋವಿಡ್-19 ದೃಢಪಟ್ಟಿದ್ದು, ಕೊರೊನಾ ವೈರಸ್ ಸೋಂಕು ತಗುಲಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಮಂಗಳವಾರ ರಾತ್ರಿ ಪ್ರಕಟಿಸಿದ್ದು, ‘ನನಗೆ ಸೋಂಕಿನ ಸೌಮ್ಯ ಲಕ್ಷಣಗಳಿವೆ ಹಾಗೂ ಕೋವಿಡ್-19 ದೃಢಪಟ್ಟಿದೆ.
ತಮ್ಮ ಸಂಪರ್ಕಕ್ಕೆ ಬಂದ ಎಲ್ಲರೂ ಪ್ರತ್ಯೇಕವಾಗಿ ವಾಸಿಸುವ ಜೊತೆಗೆ ಪರೀಕ್ಷೆಗೆ ಒಳಗಾಗುವಂತೆ ತಿಳಿಸಿದ್ದಾರೆ.ಗಡ್ಕರಿ ಅವರಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲೂ ಕೊರೊನಾ ವೈರಸ್ ಸೋಂಕು ತಗುಲಿತ್ತು.
ಅಗತ್ಯವಿರುವ ಎಲ್ಲ ನಿಯಮಗಳನ್ನು ಪಾಲಿಸುತ್ತಿದ್ದೇನೆ, ನಾನು ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದೇನೆ’ ಎಂದಿದ್ದಾರೆ.
ಓಮೈಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿರುವ ನಡುವೆ ದೇಶದಾದ್ಯಂತ ಹಲವು ಮುಖಂಡರಲ್ಲಿ ಕೋವಿಡ್-19 ದೃಢಪಟ್ಟಿದೆ. ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರಲ್ಲಿ ಇತ್ತೀಚೆಗೆ ಕೋವಿಡ್ ದೃಢಪಟ್ಟಿದೆ.