ದೆಹಲಿ: ದೇಶದಾದ್ಯಂತ ಕೊರೋನಾ ಸೋಂಕು ಉಲ್ಬಣಿಸಿದ್ದು, ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 4 ಸಾವಿರ ಗಡಿ ದಾಟಿದೆ. ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ 4,041 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಒಟ್ಟೂ 21,177 ಸಕ್ರಿಯ ಪ್ರಕರಣಗಳು ದಾಖಲಾಗಿದ್ದು ದೈನಂದಿನ ಪಾಸಿಟಿವಿಟಿ ದರವು 0.95% ರಷ್ಟಿದೆ. ಒಟ್ಟೂ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಾದ್ಯಂತ ಒಟ್ಟೂ 2,363 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚೇತರಿಕಾ ದರವು 98.74% ದಷ್ಟಿದೆ. ದೇಶದಾದ್ಯಂತ ಒಟ್ಟೂ 193.83 ಕೋಟಿ ಲಸಿಕೆ ವಿತರಣೆ ಮಾಡಲಾಗಿದೆ.