News Karnataka Kannada
Friday, May 10 2024
ದೆಹಲಿ

ಕೊರೋನಾ ಪ್ರಮಾಣ ಮತ್ತೆ ಏರಿಕೆ: 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರಕಾರ!

covid case increased
Photo Credit :

ದೆಹಲಿ: ದೇಶದಲ್ಲಿ ಕೊರೋನಾ ಪ್ರಮಾಣ ಮತ್ತೆ ಏರಿಕೆ ಕಾಣುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ. ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ ಹಾಗೂ ಕೇರಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕೋವಿಡ್ ಹೆಚ್ಚಾಗುತ್ತಿರುವ ಕಾರಣ ತೀವ್ರ ನಿಗಾವಹಿಸುವಂತೆ ಸೂಚಿಸಿದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆ. ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ. ಇದೇ ಶೀತ, ಕೆಮ್ಮು, ಜ್ವರ ಕಾಣಿಸಿದರೂ ಸೂಕ್ತ ಚಿಕಿತ್ಸೆ ಜೊತೆಗೆ ಕೋವಿಡ್ ಪರೀಕ್ಷೆ ಮಾಡಿಸಲು ಸೂಚಿಸಿದೆ.

ಇನ್ನು ಕೊರೋನಾ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಕ್ವಾರಂಟೈನ್ ಮೂಲಕ ಪ್ರಕರಣ ಹರಡದಂತೆ ತಡೆಯಲು ಸೂಚಿಸಲಾಗಿದೆ. ದೇಶದಲ್ಲಿ 3 ತಿಂಗಳ ಬಳಿಕ ಪ್ರತಿ ದಿನದ ಕೋವಿಡ್ ಪ್ರಕರಣ 4,000 ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 4,041 ಕೋವಿಡ್ ಪ್ರಕರಣ ದಾಖಲಾಗಿದೆ. 10ಜನ ಕೋವಿಡ್‌ಗೆ ಬಲಿಯಾಗಿದ್ದಾರೆ.

ಇತ್ತ ಬೆಂಗಳೂರಿನಲ್ಲಿ ಕೇವಲ ಐದು ದಿನದ ಅಂತರದಲ್ಲಿ ಮತ್ತೆ 200ಕ್ಕೂ ಅಧಿಕ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿರುವುದು ಬೆಂಗಳೂರಿಗರಲ್ಲಿ ಆತಂಕ ಹೆಚ್ಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು