Categories: ದೆಹಲಿ

ಕೊವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಯಾವುದೇ ನೋವು ನಿವಾರಕ ಮಾತ್ರೆಗಳ ಅಗತ್ಯವಿಲ್ಲ

ನವದೆಹಲಿ : ಕೊವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಪ್ಯಾರಾಸೆಟಮಾಲ್ ಅಥವಾ ಯಾವುದೇ ನೋವು ನಿವಾರಕ ಮಾತ್ರೆಗಳ ಅಗತ್ಯವಿಲ್ಲ ಎಂದು ಭಾರತ್ ಬಯೋಟೆಕ್ ಸ್ಪಷ್ಟನೆ ನೀಡಿದೆ. ಹೌದು, ದೇಶಾದ್ಯಂತ ಜನವರಿ 3 ರಿಂದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು. ಮಕ್ಕಳ ಲಸಿಕಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಕೊವ್ಯಾಕ್ಸಿನ್ ಲಸಿಕೆ ಪಡೆದ ಮಕ್ಕಳಿಗೆ ಪ್ಯಾರಾಸೆಟಮಾಲ್ ಅಥವಾ ಯಾವುದೇ ನೋವು ನಿವಾರಕ ಮಾತ್ರೆಗಳ ಅಗತ್ಯವಿಲ್ಲ ಎಂದು ಭಾರತ್ ಬಯೋಟೆಕ್ ಸ್ಪಷ್ಟನೆ ನೀಡಿದೆ.

ಭಾರತ್ ಬಯೊಟೆಕ್ ಸಂಸ್ಥೆಯು ನಡೆಸಿದ್ದ ಕ್ಲಿನಿಕಲ್ ಟ್ರಯಲ್ಸ್​ನಲ್ಲಿ ಪಾಲ್ಗೊಂಡಿದ್ದ ಸುಮಾರು 30,000 ಮಕ್ಕಳ ಪೈಕಿ ಶೇ 10ರಿಂದ 20 ಮಕ್ಕಳಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಂಡಿದ್ದವು. ಬಹುತೇಕ ಮಕ್ಕಳಲ್ಲಿ ಒಂದೆರೆಡು ದಿನಗಳಲ್ಲಿಯೇ ಅಡ್ಡಪರಿಣಾಮಗಳ ತೀವ್ರತೆ ಕಡಿಮೆಯಾಗಿತ್ತು. ಯಾವುದೇ ಮಕ್ಕಳಿಗೆ ಔಷಧಿಗಳನ್ನು ನೀಡಬೇಕಾದ ಪರಿಸ್ಥಿತಿ ಬರಲಿಲ್ಲ ಎಂದು ಭಾರತ್ ಬಯೊಟೆಕ್ ಸ್ಪಷ್ಟನೆ ನೀಡಿದೆ. ಇತರ ಕೊರೊನಾ ಲಸಿಕೆಗಳೊಂದಿಗೆ ಪ್ಯಾರಾಸೆಟಮಾಲ್ ಶಿಫಾರಸು ಮಾಡಲಾಗಿದೆ. ಆದರೆ ಕೊವ್ಯಾಕ್ಸಿನ್​ ಪಡೆದವರಿಗೆ ಪ್ಯಾರಾಸೆಟಮಾಲ್ ಕೊಡುವುದು ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ದೇಶಾದ್ಯಂತ ಜನವರಿ 3 ರಿಂದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಭಾರತವು 15ರಿಂದ 18 ವರ್ಷದ ವಯೋಮಿತಿಯ 1 ಕೋಟಿ ಮಕ್ಕಳಿಗೆ ಕೊರೊನಾ ಲಸಿಕೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವೀಯ ಹೇಳಿದ್ದಾರೆ.

Gayathri SG

Recent Posts

ವೀಕ್ಷಕರ ಗಮನ ಸೆಳೆದ ನಾಣ್ಯ ಮತ್ತು ನೋಟುಗಳ ಪ್ರದರ್ಶನ

ನಗರದ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಪುರಾತತ್ವ ಸಂಗ್ರಹಾಲಯಗಳು ಮತ್ತು  ಪರಂಪರೆ ಇಲಾಖೆಯಲ್ಲಿ  ಆಯೋಜಿಸಿರುವ ಅಪೂರ್ವ ನಾಣ್ಯ ಮತ್ತು ನೋಟುಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

7 mins ago

ಬೀದಿಗಳಲ್ಲಿ ಹಸುಗಳ ಕಾದಾಟ: ಬಾಲಕಿಯರ ಮೇಲೆ ಬಿದ್ದ ಹಸು, ವಿಡಿಯೋ ವೈರಲ್

ಸಿಸಿಟಿವಿಯಲ್ಲಿ ಆಘಾತಕಾರಿ ಘಟನೆಯೊಂದು ಸೆರೆಯಾಗಿದ್ದು ಬೀದಿಯಲ್ಲಿ ಬಾಲಕಿಯರ ಗುಂಪಿನ ಮೇಲೆ ಎರಡು ಹಸುಗಳು ಬಿದ್ದು ಉರುಳಾಡುವುದು ವೀಕ್ಷಕರನ್ನು ಬೆಚ್ಚಿ ಬೀಳಿಸಿದೆ,…

8 mins ago

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

31 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

42 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

49 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

52 mins ago