ನವದೆಹಲಿ : ಕೋವಿಡ್ ಲಸಿಕೆ ಅಭಿಯಾನದಲ್ಲಿ ಇಂದು ಭಾರತ ಹೊಸ ದಾಖಲೆ ನಿರ್ಮಾಣ ಮಾಡಿದ್ದು, ದೇಶದಲ್ಲಿ 100 ಕೋಟಿ ಡೋಸ್ ಪೂರ್ಣಗೊಂಡಿದೆ.
ಭಾರತದಲ್ಲಿ 9 ತಿಂಗಳಲ್ಲಿ 100 ಕೋಟಿ ಡೋಸ್ ಲಸಿಕೆ ನೀಡಲಾಗಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಲಸಿಕೆ ನೀಡಿದ ದೇಶ ಭಾರತವಾಗಿದೆ.ಭಾರತದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಡೋಸ್ ಗಳ ಸಂಖ್ಯೆ 100 ಕೋಟಿ ಗಡಿ ದಾಟುತ್ತಿದ್ದಂತೆ ಪ್ರಧಾನಿ ಮೋದಿ ಅವರು ಆರ್ ಎಂಎಲ್ ಆಸ್ಪತ್ರೆಗೆ ಭೇಟಿ ನೀಡಿದರು. ಆರೋಗ್ಯ ಕಾರ್ಯಕರ್ತರೊಂದಿಗೆ ಮಾತನಾಡಲಿದ್ದಾರೆ. ಜೊತೆಗೆ 100 ಕೋಟಿ ಡೋಸ್ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಂಪು ಕೋಟೆಯ ಮೇಲೆ ಅತಿ ದೊಡ್ಡ ತ್ರಿವರ್ಣ ಧ್ವಜ ಪ್ರದರ್ಶನ ಮಾಡಲಾಗುವುದು.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಬುಧವಾರ ತಡರಾತ್ರಿವರೆಗೆ ಒಟ್ಟಾರೆ 99.70 ಕೋಟಿ ಜನರು ಲಸಿಕೆಯ ಡೋಸ್ ಪಡೆದಿದ್ದಾರೆ. ದೇಶಾದ್ಯಂತ ಇದುವರೆಗೆ 71 ಕೋಟಿ ಜನರು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಪೈಕಿ ಕೊರೊನಾ ವಾರಿಯರ್ಸ್, ಹಿರಿಯ ನಾಗರಿಕರು ಕೂಡ ಸೇರಿದ್ದಾರೆ. ವರ್ಷಾಂತ್ಯದ ವೇಳೆಗೆ 80 ಕೋಟಿ ಜನರು ಮೊದಲ ಡೋಸ್ ಪಡೆದಿರುತ್ತಾರೆ ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…
ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್-ಕಣಗಿಲು ಜಾತಿಗೆ ಸೇರಿದ…
ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ ಬೀಗ…
ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.
ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…
ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ