News Karnataka Kannada
Monday, April 29 2024
ದೆಹಲಿ

ಕೋವಿಡ್ ಹೊಸ ರೂಪಾಂತರ: ಪರೀಕ್ಷೆ, ತೀವ್ರ ತಪಾಸಣೆಗೆ ರಾಜ್ಯ ,ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸೂಚನೆ

Corona 19 6 21 No 196211 Newsk 5950993830
Photo Credit :

ನವದೆಹಲಿ: ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಕೋವಿಡ್-19 ಹೊಸ ರೂಪಾಂತವನ್ನು ಪತ್ತೆಹಚ್ಚಿರುವುದಾಗಿ ಹೇಳಿದ ಬೆನ್ನಲ್ಲೇ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರವು ಹೊಸದಾಗಿ ಸಲಹೆ ಸೂಚನೆಗಳನ್ನು ನೀಡಿದೆ.

ಕೋವಿಡ್-19 ಹೊಸ ರೂಪಾಂತರವನ್ನು ಪತ್ತೆಹಚ್ಚಿರುವುದಾಗಿ ದಕ್ಷಿಣ ಆಫ್ರಿಕಾ ವಿಜ್ಞಾನಿಗಳು ಗುರುವಾರ ಹೇಳಿದ್ದರು. ಹೊಸ ರೂಪಾಂತರವನ್ನು ಬಿ.1.1.529 ಎಂದು ಕರೆಯಲಾಗಿದೆ.

ಈ ಕುರಿತು ಕೇಂದ್ರಾಡಳಿತ ಪ್ರದೇಶ ಹಾಗೂ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ (ಆರೋಗ್ಯ ಇಲಾಖೆ) ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ. ಕೋವಿಡ್ ದೃಢಪಟ್ಟಿರುವ ಅಂತರರಾಷ್ಟ್ರೀಯ ಪ್ರಯಾಣಿಕರ ಮಾದರಿಯನ್ನು ‘ಜೀನೋಮ್ ಸೀಕ್ವೆನ್ಸಿಂಗ್’ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲು ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಸೂಚಿಸಲಾಗಿದೆ.

ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೋಟ್ಸ್‌ವಾನಾಗಳಿಂದ ಬರುವ ಪ್ರಯಾಣಿಕರ ಪರೀಕ್ಷೆ ಹಾಗೂ ಸ್ಕ್ರೀನಿಂಗ್ ತೀವ್ರಗೊಳಿಸುವಂತೆ ಕೇಂದ್ರ ಸೂಚಿಸಿದೆ.

ದಕ್ಷಿಣ ಆಫ್ರಿಕಾದ ಸುಮಾರು 100 ಮಾದರಿಗಳಲ್ಲಿ ಬಿ.1.1.529 ದೃಢಪಟ್ಟಿದೆ. ಇದು ಬೋಟ್ಸ್‌ವಾನಾ ಮತ್ತು ಹಾಂಗ್‌ಕಾಂಗ್‌ನಲ್ಲೂ ಕಂಡು ಬಂದಿದೆ. ದಕ್ಷಿಣ ಆಫ್ರಿಕಾದಿಂದ ಹಾಂಗ್‌ಕಾಂಗ್‌ಗೆ ಪ್ರಯಾಣಿಸಿದ ವ್ಯಕ್ತಿಯಲ್ಲಿ ಈ ರೂಪಾಂತರ ಪತ್ತೆಯಾಗಿದೆ ಎಂದು ಗುರುವಾರ ವರದಿಯಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು