ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,318 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 465 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,63,749ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,67,933ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,07,019ಕ್ಕೆ ತಲುಪಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 10,967 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,39,88,797ಕ್ಕೆ ತಲುಪಿದೆ.