ನವದೆಹಲಿ : ಕೇಂದ್ರ ಸರ್ಕಾರದಿಂದ ಇಂದಿನಿಂದ 12 ರಿಂದ 14 ವರ್ಷದ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆಯನ್ನು ನೀಡೋದಕ್ಕೆ ಆರಂಭಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡುತ್ತಿದ್ದರೇ, ಖಾಸಗಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡೋದಕ್ಕಾಗಿ ದರವನ್ನು ನಿಗದಿ ಪಡಿಸಲಾಗಿದೆ.
ಪ್ರತಿ ಡೋಸ್ ಲಸಿಕೆಗೆ ರೂ.990 ನಿಗದಿ ಪಡಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, 12-14 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತಿ ಡೋಸ್ ಗೆ ₹990 ನಿಗದಿ ಪಡಿಸಲಾಗಿದೆ. ಹೀಗಾಗಿ ಮಕ್ಕಳ ಪೋಷಕರು ಖಾಸಗಿ ಆಸ್ಪತ್ರೆಗಳಲ್ಲಿಯೂ ರೂ.990 ನೀಡಿ ಕಾರ್ಬೆವಾಕ್ಸ್ ಲಸಿಕೆಯನ್ನ ಪಡೆಯಬಹುದಾಗಿದೆ.