ನವದೆಹಲಿ: ಗುರುಗ್ರಾಮ್ ಸೆಕ್ಟರ್ 65 ರ ಕದರ್ಪುರ್ ಗ್ರಾಮದಲ್ಲಿ 85 ವರ್ಷದ ದೇವಸ್ಥಾನದ ಅರ್ಚಕನ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಗೋವಿಂದ್ ದಾಸ್ (85) ಎಂದು ಗುರುತಿಸಲಾಗಿದ್ದು, ಕಳೆದ 35 ವರ್ಷಗಳಿಂದ ದೇವಸ್ಥಾನದಲ್ಲಿ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಬೆಳಗ್ಗೆ ಆ ಪ್ರದೇಶದ ನಿವಾಸಿಗಳು ದೇವಸ್ಥಾನಕ್ಕೆ ಪೂಜೆಗಾಗಿ ತೆರಳಿದ್ದ ವೇಳೆ ದೇವಸ್ಥಾನದ ಅರ್ಚಕ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಕೂಡಲೇ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ವಿಧಿವಿಜ್ಞಾನ ತಜ್ಞರೊಂದಿಗೆ ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಕತ್ತು ಸೀಳಿ ಪಾದ್ರಿಯನ್ನು ತಡರಾತ್ರಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.